ಮುಂಬೈ, ಮೇ 20, ಮಹಾರಾಷ್ಟ್ರದಲ್ಲಿ ನಕ್ಸಲರ ಅಟ್ಟಹಾಸ ಮುಂದುವರೆದಿದ್ದು, ಗಡ್ಜಿರೋಲಿ ಜಿಲ್ಲೆಯಲ್ಲಿ ನಕ್ಸಲರು ಮೂರು ಟ್ರಕ್ ಗಳಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಗಡ್ಜಿರೋಲಿ ಜಿಲ್ಲೆಯ ಧನೋರಾದಲ್ಲಿ ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಟ್ರಕ್ ಗಳನ್ನು ನಕ್ಸಲರು ಗುರಿ ಮಾಡಿ ದಾಳಿ ಮಾಡಿದ್ದಾರೆ ಈ ಸಂಬಂಧ ಮಾವೋವಾದಿಗಳು ಕೆಂಪು ಬ್ಯಾನರ್ ಗಳಲ್ಲಿ ಎಚ್ಚರಿಕೆ ಸಂದೇಶವನ್ನು ಬರೆದಿಟ್ಟು ಹೋಗಿದ್ದಾರೆ.ಇನ್ನು ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ. ರಸ್ತೆ ನಿರ್ಮಾಣ ಕಾರ್ಯಕ್ಕೆ ಅಡ್ಡಿಪಡಿಸುವ ನಿಟ್ಟಿನಲ್ಲಿ ಟ್ರಕ್ ಗಳನ್ನು ಸುಟ್ಟು ಹಾಕಿದ್ದಾರೆ ಎಂದು ತಿಳಿದು ಬಂದಿದೆ.