ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಅಗತ್ಯ ಸಿದ್ಧತೆ: ಶಾಸಕ ವಿಶ್ವಾಸ ವೈದ್ಯ
Necessary preparations to celebrate Rajyotsava grandly: MLA Vishwas Vaidya
ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಅಗತ್ಯ ಸಿದ್ಧತೆ: ಶಾಸಕ ವಿಶ್ವಾಸ ವೈದ್ಯ
ಸವದತ್ತಿ 18: ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಭೆ ನಡೆಯಿತು.ಶಾಸಕ ವಿಶ್ವಾಸ ವೈದ್ಯ ಮಾತನಾಡಿ, ಪ್ರತಿವರ್ಷದಂತೆ ಕನ್ನಡಾಂಬೆ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿ ಜಾನಪದ ಕಲಾತಂಡ ಮತ್ತು ಆಶಾ ಅಂಗನವಾಡಿ ಕಾರ್ಯಕರ್ತೆಯರ ಪೂರ್ಣಕುಂಭ ಕಳಸದೊಂದಿಗೆ ಅದ್ದೂರಿ ಮೆರವಣಿಗೆ ಮಾಡಬೇಕು ಎಂದು ತಿಳಿಸಿದರು.ಸರ್ಕಾರಿ ಕಚೇರಿ ಮತ್ತು ಮೆರವಣಿಗೆ ಸಾಗುವ ರಸ್ತೆಯಲ್ಲಿ ವಾಣಿಜ್ಯ ಮಳಿಗೆಗಳ ಮೇಲೆ ಕನ್ನಡ ಬಾವುಟ ಹಾರಿಸಲು ಕ್ರಮ ಕೈಗೊಳ್ಳಬೇಕು. ಮೆರವಣಿಗೆಯಲ್ಲಿ ಸಾಗುವ ಕನ್ನಡಾಂಬೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವಂತೆ ನಗರಸಭೆ ಕಾರ್ಯಕ್ರಮ ರೂಪಿಸಬೇಕು ಎಂದು ಹೇಳಿದರು.ಈ ವೇಳೆ ತಹಶೀಲ್ದಾರ ಮಲ್ಲಿಕಾರ್ಜುನ ಹೆಗನ್ನವರ, ಪ್ರಬಾರಿ ಇಓ ಬಸವರಾಜ ಅಯ್ಯನಗೌಡ್ರ, ಉಪ ತಹಶೀಲ್ದಾರ ಎಮ್ ಎನ್. ಮಠದ, ಬಿಇಓ ಎ. ಎ. ಖಾಜಿ, ಕಸಾಪ ಅಧ್ಯಕ್ಷ ಡಾ. ವಾಯ್. ಎಂ. ಯ್ಯಾಕೋಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಇದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 