ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಅಗತ್ಯ ಕ್ರಮ: ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳಕರ್
Necessary steps to construct own buildings for Anganwadi centers: Minister Lakshmi R. Hebbalkar
ಬೆಳಗಾವಿ ಸುವರ್ಣ ವಿಧಾನಸೌಧ ಡಿ.17: ಇಳಕಲ್ ಮತ್ತು ಹುನಗುಂದ ಎರಡೂ ತಾಲ್ಲೂಕುಗಳಲ್ಲಿ 100 ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದ್ದು, ನಿವೇಶನ ಮತ್ತು ಅನುದಾನದ ಲಭ್ಯತೆಯನುಸಾರ ಸ್ವಂತ ಕಟ್ಟಡಗಳನ್ನು ನಿರ್ಮಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳಕರ್ ತಿಳಿಸಿದರು.
ಇಂದು ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಹುನುಗುಂದ ಶಾಸಕ ಕಾಶಪ್ಪನವರ ವಿಜಯಾನಂದ ಶಿವಶಂಕರ್ಪ ಇವರು ಇಳಕಲ್ ಹಾಗೂ ಹುನಗುಂದ ತಾಲ್ಲೂಕುಗಳಲ್ಲಿ 358 ಅಂಗನವಾಡಿಗಳ ಪೈಕಿ 217 ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳಿದ್ದು, 41 ಅಂಗನವಾಡಿ ಕೇಂದ್ರಗಳು ಸರ್ಕಾರಿ ಕಟ್ಟಡ/ಪರ್ಯಾಯ ವ್ಯವಸ್ಥೆಯಾಗಿ ಇತರೆ ಕಟ್ಟಡದಲ್ಲಿ ನಡೆಯುತ್ತಿವೆ. ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ 100 ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಿಕೊಡಬೇಕೆಂದು ಕೇಳಿದ ಪ್ರಶ್ನೆಗೆ ಒಟ್ಟಾರೆ 3500 ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿವೆ.
ಈಗಾಗಲೇ ಸ್ವಂತ ಕಟ್ಟಡ ನಿರ್ಮಿಸಲು ಅಗತ್ಯ ಕ್ರಮ ವಹಿಸಲಾಗಿದ್ದು, ಸ್ವಂತ ಕಟ್ಟಡ ನಿರ್ಮಿಸಲು ಸಾಧ್ಯವಾಗದ ಕಡೆಗಳಲ್ಲಿ, ಕಟ್ಟಡಗಳು ಶಿಥಿಲವಾಗಿದ್ದಲ್ಲಿ ಕಟ್ಟಡಗಳನ್ನು ಬೇರೆ ಕಟ್ಟಡಗಳನ್ನು ಹಸ್ತಾಂತರ ಮಾಡಲು ಅಗತ್ಯ ಕ್ರಮ ವಹಿಸಲಾಗುವುದು. ಸ್ವಂತ ಕಟ್ಟಡ ನಿರ್ಮಿಸಲು ಅಗತ್ಯ ಕ್ರಮಕ್ಕಾಗಿ ಈಗಾಗಲೇ ಕಂದಾಯ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ಸಚಿವೆ ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 