ಕಾರ್ಯಕರ್ತೆಯರಿಗೆ ಹೆಚ್ಚಿನ ಶಕ್ತಿ ತುಂಬುವ ಅಗತ್ಯ: ಶಾಸಕ ಯಾಸೀರ್ ಖಾನ್ ಪಠಾಣ್
Need to empower women activists: MLA Yasir Khan Pathan
ಶಿಗ್ಗಾವಿ, ಜು.26: ಇಂದಿನ ಬದಲಾಗುತ್ತಿರುವ ಪರಿಸ್ಥಿತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚಿನ ಶಕ್ತಿ, ಸೌಲಭ್ಯ ಹಾಗೂ ಗೌರವ ನೀಡುವುದು ಅತ್ಯಗತ್ಯವಾಗಿದೆ ಎಂದು ಶಾಸಕ ಯಾಸೀರ್ ಖಾನ್ ಪಠಾಣ್ ಹೇಳಿದರು. ಪಟ್ಟಣದ ಸಂಗನಬಸವ ಮಂಗಲಭವನದಲ್ಲಿ ಆಯೋಜಿಸಿದ್ದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತಾಲೂಕು ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು,
ಅಂಗನವಾಡಿ ಕಾರ್ಯಕರ್ತೆಯರು ಅತ್ಯಂತ ಕಡಿಮೆ ಗೌರವಧನದಲ್ಲಿ ತಾಯಂದಿರ ಸ್ಥಾನದಲ್ಲಿ ನಿಂತು ಮಕ್ಕಳ ಶೈಕ್ಷಣಿಕ ಪ್ರಗತಿ, ಪೌಷ್ಟಿಕತೆ ಹಾಗೂ ಆರೋಗ್ಯ ರಕ್ಷಣೆಯಲ್ಲಿ ಮಹತ್ವದ ಸೇವೆ ಸಲ್ಲಿಸುತ್ತಿದ್ದಾರೆ. ಸರ್ಕಾರದ ವಿವಿಧ ಯೋಜನೆಗಳ ಯಶಸ್ವಿ ಅನುಷ್ಠಾನದಲ್ಲಿಯೂ ಅವರ ಪಾತ್ರ ಅನಿವಾರ್ಯವಾಗಿದೆ ಎಂದು ಹೇಳಿದರು. ಕಾರ್ಯಕರ್ತೆಯರ ಸೇವೆಯನ್ನು ಸರ್ಕಾರ ಸೂಕ್ತವಾಗಿ ಗುರುತಿಸಿ, ಅವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಅವರು ತಿಳಿಸಿದರು.
ಸಮಾರಂಭದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷೆ ಬಿ. ಅಹ್ಮದ್ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಹಲವು ವರ್ಷಗಳಿಂದ ಮಕ್ಕಳ, ಗರ್ಭಿಣಿಯರ ಮತ್ತು ಬಾಣಂತಿಯರ ಆರೋಗ್ಯ ಹಾಗೂ ಪೌಷ್ಟಿಕತೆಯ ಅಭಿವೃದ್ಧಿಗೆ ನಿರಂತರ ಸೇವೆ ಸಲ್ಲಿಸುತ್ತಿದ್ದರೂ, ಅವರಿಗೆ ಸಮರ್ಕ ಗೌರವಧನ ಮತ್ತು ಸೇವಾ ಸೌಲಭ್ಯಗಳು ಇನ್ನೂ ದೊರೆಯುತ್ತಿಲ್ಲ ಎಂದು ವಿಷಾದಿಸಿದರು.
ಅಂಗನವಾಡಿ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳಾದ ಗೌರವಧನ ಹೆಚ್ಚಳ, ಸೇವಾ ಭದ್ರತೆ, ಮಾಸಿಕ ಪಿಂಚಣಿ, ಗೃಹಲಕ್ಷ್ಮಿ ಯೋಜನೆಯ ಜವಾಬ್ದಾರಿಯಿಂದ ವಿನಾಯಿತಿ ಸೇರಿದಂತೆ ಹಲವು ಸಮಸ್ಯೆಗಳನ್ನು ಸರ್ಕಾರ ಶೀಘ್ರವೇ ಪರಿಷ್ಕರಿಸಬೇಕು ಎಂದು ಅವರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಗುಡ್ಡಪ್ಪ ಜಲದಿ, ಗೌಸಖಾನ್ ಮುನಸಿ, ವಸಂತ ಬಾಗೂರ, ಚಂದ್ರ ಕೊಡ್ಲಿವಾಡ, ಹಜರತಲಿ ಚೂಡಿದಾರ, ಜಿಲ್ಲಾ ಅಧ್ಯಕ್ಷೆ ಸುನಂದಾ ರೇವಣಕರ, ತಾಲೂಕು ಅಧ್ಯಕ್ಷ ಟಿ. ನಾಗನಗೌಡರ, ಕಾರ್ಯದರ್ಶಿ ಸರಸ್ವತಿ ಕೊರಿಶೆಟ್ಟಿ, ಎಂ.ಸಿ. ದೇವಗಿರಿ, ಮುಕ್ತಾ ತೋಟದ, ಎಂ.ಜೆ. ಪ್ರಸಾದಿಮಠ, ತಿಪ್ಪವ್ವ ಜವಳಗಟ್ಟಿ, ಶುಕ್ರ ಬಡಿಗೇರ, ಅಂಬಿಕಾ ಪಾಟೀಲ, ಸುನಂದಮ್ಮ ಹುಲಿಕಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 