ಅಮೆರಿಕದಲ್ಲಿ ನೇಹಾಲ್ ಮೋದಿ ಬಂಧನ
Nehal Modi arrested in America
ವಾಷಿಂಗ್ಟನ್ 05: ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಬಹುಕೋಟಿ ವಂಚನೆ ಮಾಡಿ ದೇಶದಿಂದ ಪರಾರಿಯಾಗಿರುವ ಆರ್ಥಿಕ ಅಪರಾಧಿ ವಜ್ರದ ವ್ಯಾಪಾರಿ ನೀರವ್ ಮೋದಿ ಅವರ ಸಹೋದರ ನೇಹಾಲ್ ಮೋದಿಯನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ. ಸಿಬಿಐ ಮತ್ತು ಇಡಿ ಗಡಿಪಾರು ಕೋರಿಕೆ ಮೇರೆಗೆ ಬಂಧನ ಮಾಡಲಾಗಿದೆ ಎಂದು ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ಸುದ್ದಿಸಂಸ್ಥೆ ಶನಿವಾರ ವರದಿ ಮಾಡಿದೆ.
ಜುಲೈ 4 ರಂದು ಬೆಲ್ಜಿಯಂ ಪ್ರಜೆಯಾದ ನೆಹಾಲ್ ಮೋದಿಯನ್ನು ಕಸ್ಟಡಿಗೆ ತೆಗೆದುಕೊಂಡಿರುವುದಾಗಿ ಅಮೆರಿಕದ ಸಂಸ್ಥೆಗಳು ಭಾರತಕ್ಕೆ ಮಾಹಿತಿ ನೀಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಜುಲೈ 17 ರಂದು ಈ ವಿಚಾರದ ಮುಂದಿನ ವಿಚಾರಣೆ ನಡೆಯಲಿದ್ದು, ಆಗ ನೆಹಾಲ್ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ. ಆದರೆ ಜಾಮೀನು ಅರ್ಜಿಗೆ ಅಮೆರಿಕ ಪ್ರಾಸಿಕ್ಯೂಟರ್ ಗಳು ವಿರೋಧ ವ್ಯಕ್ತಪಡಿಸುವ ಸಾಧ್ಯತೆಯಿದೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ, 2002ರ ಸೆಕ್ಷನ್ 3 ಮತ್ತು ಐಪಿಸಿ ಸೆಕ್ಷನ್ 120 ಬಿ ಕ್ರಿಮಿನಲ್ ಪಿತೂರಿ, ಸೆಕ್ಷನ್ 201 ಸಾಕ್ಷಿನಾಶ ಆರೋಪದ ಮೇಲೆ ನೇಹಾಲ್ ಮೋದಿ ಹಸ್ತಾಂತರ ಪ್ರಕ್ರಿಯೆಗಳು ನಡೆಯುತ್ತಿವೆ ಎನ್ನಲಾಗಿದೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 