ನೇಪಾಳ ಪ್ರವಾಹ: ಬಳ್ಳಾರಿ ಜಿಲ್ಲೆಯ ಪ್ರವಾಸಿಗರು, ನಾಗರಿಕರ ನೆರವಿಗೆ ಸಹಾಯವಾಣಿ ಆರಂಭ

ನೇಪಾಳ ಪ್ರವಾಹ: ಬಳ್ಳಾರಿ ಜಿಲ್ಲೆಯ ಪ್ರವಾಸಿಗರು, ನಾಗರಿಕರ ನೆರವಿಗೆ ಸಹಾಯವಾಣಿ ಆರಂಭ Nepal Floods: Helpline launched to assist tourists and citizens from Ballari district

ಲೋಕದರ್ಶನ ವರದಿ 

         ಬಳ್ಳಾರಿ  27: ನೇಪಾಳದಲ್ಲಿ ಸಂಭವಿಸಿದ ದಿಢೀರ್ ಪ್ರವಾಹ ಹಾಗೂ ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾಡಳಿತವು ತುರ್ತು ಸಹಾಯವಾಣಿ ಕೇಂದ್ರಗಳನ್ನು ತೆರೆದಿದ್ದು, ಸಾರ್ವಜನಿಕರ ನೆರವಿಗೆ ಮುಂದಾಗಿದೆ. 

ಪ್ರವಾಹ ದುರಂತದಲ್ಲಿ ಹಲವಾರು ಮಂದಿ ಸಾವನ್ನಪ್ಪಿದ್ದು, ನೂರಾರು ಜನ ನಾಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಕೇಂದ್ರ ಗೃಹ ಸಚಿವಾಲಯ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ ಬಳ್ಳಾರಿ ಜಿಲ್ಲಾಡಳಿತವೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. 

ಬಳ್ಳಾರಿ ಜಿಲ್ಲೆಯ ಮೂಲದ ನಾಗರಿಕರು ಅಥವಾ ಪ್ರವಾಸಿಗರು ನೇಪಾಳದಲ್ಲಿ ಸಿಲುಕಿ ಸಂಪರ್ಕಕ್ಕೆ ಸಿಗದೆ ಇದ್ದಲ್ಲಿ, ಅವರ ಪೂರ್ಣ ವಿವರಗಳನ್ನು ತಕ್ಷಣವೇ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಒದಗಿಸುವಂತೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್‌.ಕೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.