ದಕ್ಷಿಣ ಕೊರಿಯಾದಲ್ಲಿ ಕೊವಿಡ್-19 ನ ಹೊಸ 4 ಪ್ರಕರಣ ಪತ್ತೆ, ಒಟ್ಟು ಸಂಖ್ಯೆ 10,765 ಕ್ಕೆ ಏರಿಕೆ

ಸಿಯೋಲ್, ಏಪ್ರಿಲ್ 30,ದಕ್ಷಿಣ ಕೊರಿಯಾದಲ್ಲಿ ಕಳೆದ ಒಂದು ದಿನದಲ್ಲಿ ಕೊವಿಡ್ -19ನ ಹೊಸ ಪ್ರಕರಣಗಳು ನಾಲ್ಕು ಪ್ರಕರಣಗಳು ವರದಿಯಾಗಿದ್ದು, ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 10,765 ಕ್ಕೆ ಏರಿದೆ ಎಂದು ಅಲ್ಲಿನ ಆರೋಗ್ಯ ಸಚಿವಾಲಯದ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರ (ಕೆಸಿಡಿಸಿ) ಗುರುವಾರ ತಿಳಿಸಿದೆ.  ಹೊಸ ಪ್ರಕರಣಗಳೆಲ್ಲವೂ ವಿದೇಶ ಪ್ರಯಾಣದ ಇತಿಹಾಸ ಹೊಂದಿವೆ. ಕಳೆದ ಒಂದು ದಿನದಲ್ಲಿ ಒಂದು ಸಾವು ಸಂಭವಿಸಿದ್ದು,  ಸಾವಿನ ಸಂಖ್ಯೆ 247ಕ್ಕೆ ಏರಿದೆ. ಈ ಮಧ್ಯೆ, ದೇಶದಲ್ಲಿ ಇದುವರೆಗೆ ಮಾರಕ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,059 ತಲುಪಿದೆ.ದೇಶದಲ್ಲಿ 6,00,000 ಕ್ಕೂ ಹೆಚ್ಚು ಕರೋನವೈರಸ್ ಪರೀಕ್ಷೆಗಳನ್ನು ನಡೆಸಲಾಗಿದ್ದು, ಇನ್ನೂ 8,634 ಪರೀಕ್ಷೆಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಬುಧವಾರ ದಕ್ಷಿಣ ಕೊರಿಯಾದಲ್ಲಿ ಒಂಬತ್ತು ಹೊಸ ಕೊವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಎರಡು ಸಾವುಗಳು ಸಂಭವಿಸಿದ್ದವು. ಮಾರ್ಚ್ 11 ರಂದು ವಿಶ್ವ ಆರೋಗ್ಯ ಸಂಸ್ಥೆ ಕೊವಿಡ್-19ನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಿತ್ತು. ಇಲ್ಲಿಯವರೆಗೆ, ವಿಶ್ವಾದ್ಯಂತ 31 ಲಕ್ಷಕ್ಕೂ ಹೆಚ್ಚು ಜನರು ಕರೋನವೈರಸ್ ಸೋಂಕಿಗೆ ಒಳಗಾಗಿದ್ದು, 227,000 ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ವರದಿ ತಿಳಿಸಿದೆ