ಮುದೇಬಿಹಾಳಕ್ಕೆ ನೂತನ ಆಂಬುಲೆನ್ಸ್: ಶಾಸಕ ನಾಡಗೌಡರಿಗೆ ಸನ್ಮಾನ
New Ambulance for Mudebihal: MLA Nadagouda Felicitated
ತಾಳಿಕೋಟಿ ಸೆ.10: ಮುದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ಪ್ರಯತ್ನದ ಫಲವಾಗಿ ಕೆಎಸ್ಡಿಎಲ್ ವತಿಯಿಂದ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ಆಂಬುಲೆನ್ಸ್ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಡಾ. ಎಪಿಜೆ ಅಬ್ದುಲ್ ಕಲಾಂ ಫೌಂಡೇಶನ್ ಪದಾಧಿಕಾರಿಗಳು ಶಾಸಕರನ್ನು ಸನ್ಮಾನಿಸಿ ಗೌರವಿಸಿದರು. ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ನಡೆದ ನೂತನ ಆಂಬುಲೆನ್ಸ್ ಹಸ್ತಾಂತರ ಕಾರ್ಯಕ್ರಮದಲ್ಲಿ ಶಾಸಕ ನಾಡಗೌಡ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ನಾಡಗೌಡ, ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಾ ಆಸ್ಪತ್ರೆಗೆ ಬರುವವರಿಗೆ ಸಕಾಲದಲ್ಲಿ ಚಿಕಿತ್ಸೆ ದೊರೆಯಲು ಆಂಬುಲೆನ್ಸ್ ಅಗತ್ಯವಿತ್ತು. ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರ ಬೇಡಿಕೆಯ ಹಿನ್ನೆಲೆಯಲ್ಲಿ ಕೆಎಸ್ಡಿಎಲ್ ವತಿಯಿಂದ ನೀಡಲಾದ ವಾಹನವನ್ನು ಆಸ್ಪತ್ರೆಗೆ ಹಸ್ತಾಂತರಿಸಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಸ್ಲಿಂ ಧಾರ್ಮಿಕ ಮುಖಂಡ ಸಯ್ಯದ್ ಶಕೀಲ್ ಅಹ್ಮದ್ ಕಾಜಿ, ಆಡಳಿತ ವೈದ್ಯಾಧಿಕಾರಿ ಕೆ.ಜಿ.ಬಿರಾದಾರ, ಶಸ್ತ್ರಚಿಕಿತ್ಸಕ ಡಾ. ಸಾಗರ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ಚೋರಗಸ್ತಿ, ಪಕ್ಷದ ಹಿರಿಯ ನಾಯಕ ಬಿ.ಎಸ್. ಪಾಟೀಲ ಯಾಳಗಿ, ಎಂ.ಜಿ. ಪಾಟೀಲ ಗುಂಡಕನಾಳ, ಡಾ. ಎಪಿಜೆ ಅಬ್ದುಲ್ ಕಲಾಂ ಫೌಂಡೇಶನ್ ಅಧ್ಯಕ್ಷ ಮೊಹಮ್ಮದ್ ಶಫೀಕ್ ಇನಾಮದಾರ ಸೇರಿದಂತೆ ಹಲವರು, ಆಸ್ಪತ್ರೆ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 