ಮುಂಡಗೋಡ ಪೊಲೀಸ್ ಠಾಣೆಗೆ ನೂತನ ಸಿಪಿಐ ರಮೇಶ್ ಹಾನಪುರ ನೇಮಕ
New CPI Ramesh Hanapura appointed to Mundagoda Police Station
ಲೋಕದರ್ಶನ ವರದಿ
ಮುಂಡಗೋಡ 14 : ಪಟ್ಟಣದ ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಸಿಪಿಐ ಆಗಿ ಸೇವೆ ಸಲ್ಲಿಸುತ್ತಿದ್ದ ರಂಗನಾಥ ನೀಲಮ್ಮನವರ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಪೊಲೀಸ್ ಇನ್ಸ್ಪೆಕ್ಟರ್ ರಮೇಶ್ ಹಾನಪುರ ಅವರನ್ನು ಮುಂಡಗೋಡದ ನೂತನ ಸಿಪಿಐ ಆಗಿ ನೇಮಕಗೊಳಿಸಲಾಗಿದೆ. ರಂಗನಾಥ ನೀಲಮ್ಮನವರ ಅವರನ್ನು ಮಂಗಳೂರು ಸಿಸಿಆರ್ ಬಿಗೆ ವರ್ಗಾವಣೆ ಮಾಡಲಾಗಿದೆ. ಇತ್ತ, ರಮೇಶ್ ಹಾನಪುರ ಅವರು ಯಲ್ಲಾಪುರ ತಾಲೂಕಿನಲ್ಲಿ ಸಿಪಿಐ ಆಗಿ ಕಾರ್ಯನಿರ್ವಹಿಸಿ, ಇತ್ತೀಚೆಗೆ ಮಂಗಳೂರು ಸಿಸಿಆರ್ ಬಿಗೆ ವರ್ಗಾವಣೆಯಾಗಿದ್ದರು. ಇದೀಗ ಅವರನ್ನು ಮುಂಡಗೋಡ ಪೊಲೀಸ್ ಠಾಣೆಯ ಸಿಪಿಐ ಆಗಿ ನಿಯುಕ್ತಿಗೊಳಿಸಲಾಗಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 