ಬೆಳಗಾವಿ, ಜೂನ್30: ನೂತನ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಮಂಗಳವಾರ (ಜೂ.30) ಅಧಿಕಾರ ಸ್ವೀಕರಿಸಿದರು.
ಸೇವಾ ನಿವೃತ್ತಿ ಹೊಂದಿದ ನಿಕಟಪೂರ್ವ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಅಧಿಕಾರವನ್ನು ಹಸ್ತಾಂತರಿಸಿದರು.
ಬೆಳಗಾವಿ ದೊಡ್ಡ ಮತ್ತು ಸೂಕ್ಷ್ಮ ಜಿಲ್ಲೆಯಾಗಿದೆ. ಆದರೆ ನಾನು ಮೂಲತಃ ಬೆಳಗಾವಿ ಜಿಲ್ಲೆಯವನಾಹಿರುವುದರಿಂದ ಕೆಲಸ ಸುಲಭವಾಗಲಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು.