ನೂತನ ನ್ಯಾಯಾಧೀಶೆ ಪದ್ಮಾವತಿಯವರಿಗೆ ಭಾರತೀಯ ಜನತಾ ಪಾರ್ಟಿ ಮಂಡಳಿಯಿಂದ ಸನ್ಮಾನ
New Judge Padmavati felicitated by Bharatiya Janata Party board
ದಾಂಡೇಲಿ - 23 : ನೂತನವಾಗಿ ನ್ಯಾಯಾಧೀಶೆಯಾಗಿ ಆಯ್ಕೆಯಾಗಿರುವ ಪದ್ಮಾವತಿಯವರನ್ನು ಅವರ ಮನೆಗೆ ತೆರಳಿ ಸ್ಥಳೀಯ ಭಾರತೀಯ ಜನತಾ ಪಾರ್ಟಿ ಮಂಡಳದವತಿಯಿಂದ ಸೋಮವಾರ ಮುಂಜಾನೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಿ.ಜೆ.ಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರು ಹಾಗೂ ಮಾಜಿ ಶಾಸಕರಾದ ಸುನೀಲ ಹೆಗಡೆಯವರು ಮಾತನಾಡಿ ಇಂದು ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ ಕನಸು ನನಸಾದಂತಾಗಿದೆ. ಬಡತನದಲ್ಲಿಯೇ ವಿದ್ಯಾಭ್ಯಾಸವನ್ನು ಮುಗಿಸಿ ನ್ಯಾಯಾಧೀಶೆಯಾಗಿ ಆಯ್ಕೆಯಾದ ದಾಂಡೇಲಿಯ ಪದ್ಮಾವತಿಯವರ ಸಾಧನೆ ಸಂವಿಧಾನಕ್ಕೆ ಬಲ ತುಂಬಿದಂತಾಗಿದೆ. ಎಂದು ನುಡಿದು ಬರುವ ದಿನಗಳಲ್ಲಿ ಪದ್ಮಾವತಿಯವರಿಗೆ ಹೆಚ್ಚಿನ ಶ್ರೇಯಸ್ಸು ಲಬ್ಯವಾಗಲಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿ.ಜೆ.ಪಿ ಸ್ಥಳೀಯ ಅಧ್ಯಕ್ಷರಾದ ಬುಧವಂತಗೌಡ ಪಾಟೀಲ್ ಉಪಾಧ್ಯಕ್ಷ ಗುರುಮಠಪತಿ, ಪ್ರಧಾನ ಕಾರ್ಯದರ್ಶಿ ಗೀರಿಶ್ ಟೋಸುರ್, ಮತ್ತಿತರರು ಉಪಸ್ಥಿತರಿದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 