ಹೊಸ ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ಶೀಘ್ರ: ಚನಗೊಂಡ
New Taluk Development Struggle Committee to be formed soon: Chanagonda
ದೇವರಹಿಪ್ಪರಗಿ 01: ನೂತನ ತಾಲೂಕು ಆಗಿ ದಶಕ ಕಳೆದರೂ ಹಲವು ಇಲಾಖೆಗಳಿಗೆ ಸ್ವಂತ ಕಟ್ಟಡವಿಲ್ಲ. ಮೂಲ ಸೌಕರ್ಯಗಳ ಕೊರತೆ ಸಾಕಷ್ಟಿದೆ. ಹಲವು ಗ್ರಾಮಗಳ ಜನರು ಇಂದಿಗೂ ಸರ್ಕಾರದ ಕೆಲ ಕೆಲಸಗಳಿಗಾಗಿ ಮೂಲ ತಾಲೂಕಿಗೆ ಅಲೆದಾಡುತ್ತಿದ್ದಾರೆ. ಆಡಳಿತಾರೂಢ ಸರ್ಕಾರಗಳು ಹೊಸ ತಾಲೂಕಿನ ಸಮಸ್ಯೆಗಳಿಗೆ ಸ್ಪಂದಿಸದೆ ಮಲತಾಯಿ ಧೋರಣೆ ಅನುಸರಿಸುತ್ತಿವೆ, ಕಾರಣ ಪಕ್ಷಾತೀತವಾಗಿ ಜಾತ್ಯಾತೀತವಾಗಿ ತಾಲೂಕ ಅಭಿವೃದ್ಧಿ ಹೋರಾಟ ಸಮಿತಿ ಶೀಘ್ರದಲ್ಲಿ ರಚಿಸಲಾಗುವುದು ಎಂದು ಹಿರಿಯ ವಕೀಲರಾದ ದಾನಪ್ಪಗೌಡ ಚನಗೊಂಡ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ನೂತನ ತಾಲೂಕು ಕಾನಿಪ ಪದಾಧಿಕಾರಿಗಳಿಗೆ ವಕೀಲರ ನೇತೃತ್ವದಲ್ಲಿ ಸನ್ಮಾನಿಸಿ ಮಾತನಾಡಿದ ಅವರು, ಪಟ್ಟಣದಲ್ಲಿ ಉನ್ನತ ಮಟ್ಟದ ಶಿಕ್ಷಣ ಸಂಸ್ಥೆ, ಮೂಲಸೌಕರ್ಯದ ಕೊರತೆ ಇದೆ. ಜನಸಂಖ್ಯೆಯೂ ಹೆಚ್ಚಿದೆ ತಾಲೂಕು ಕೇಂದ್ರಕ್ಕೆ ಬೇಕಾದ ಎಲ್ಲಾ ಕಚೇರಿಗಳು ಇನ್ನು ಆಗಿಲ್ಲ. ರಾಜಕೀಯ ನಾಯಕರನ್ನು ಒಳಗೊಂಡ ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ರಚನೆ ಮಾಡಲಾಗುವುದು. ಈ ಕುರಿತು ತಾಲೂಕಿನ ಎಲ್ಲಾ ಸಂಘಟನೆಗಳು, ಪತ್ರಕರ್ತರು, ಜಾತ್ಯಾತೀತವಾಗಿ ಹಾಗೂ ಪಕ್ಷಾತೀತವಾಗಿ ಸ್ವಾರ್ಥ ರಹಿತ ಹೋರಾಟಕ್ಕೆ ಸ್ಪಂದಿಸುವ ನೂತನ ಸಮಿತಿಗೆ ಶೀಘ್ರದಲ್ಲಿ ಪೂರ್ವಭಾವಿ ಸಭೆ ಕರೆಯಲಾಗುವುದು.
ನಮ್ಮೆಲ್ಲರ ಹೋರಾಟಕ್ಕೆ ತಾಲೂಕಿನ ಪತ್ರಕರ್ತರು ಸ್ಪಂದಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಶಿಷ್ಟ ಸ್ಥಾನವನ್ನು ಹೊಂದಿದ ಪತ್ರಿಕಾರಂಗವು ಸಮಾಜದಲ್ಲಿ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಲು ನೂತನ ತಾಲೂಕು ಅಭಿವೃದ್ಧಿ ಹೊಂದಲು ತಮ್ಮೆಲ್ಲರ ಸಹಾಯ, ಸಹಕಾರ ಹಾಗೂ ಮಾರ್ಗದರ್ಶನ ಅತಿ ಮುಖ್ಯವಾಗಿದೆ ಎಂದು ಹೇಳಿದರು. ನ್ಯಾಯವಾದಿ ಎಸ್.ಬಿ. ಪಾಟೀಲ ನಿರೂಪಿಸಿದರು. ಕಾನಿಪ ನೂತನ ಪದಾಧಿಕಾರಿಗಳಿಗೆ ಹಿರಿಯ ವಕೀಲರಿಂದ ಅಭಿನಂದಿಸಿ, ಸನ್ಮಾನಿಸಲಾಯಿತು. ನ್ಯಾಯವಾದಿಗಳಾದ ಬಸವರಾಜ ಮಲ್ಲಾರಿ, ಎಸ್.ಕೆ. ಸಜ್ಜನ, ಮಲ್ಲು ಪಡಗಾನೂರ, ಕಾಶಿನಾಥ ಚವ್ಹಾಣ, ರವಿ ನಾಯಕ ಸೇರಿದಂತೆ ವಕೀಲರು ಹಾಗೂ ರೈತ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 