ಮಾಸ್ಕೋ, ಜ13: ನ್ಯೂಜಿಲೆಂಡ್ ನ ವೈಟ್ ದ್ವೀಪದಲ್ಲಿ ಡಿಸೆಂಬರ್ ನಲ್ಲಿ ಸ್ಫೋಟಿಸಿದ ಜ್ವಾಲಾಮುಖಿಯಿಂದ ಮೃತಪಟ್ಟವರ ಸಂಖ್ಯೆ 18ಕ್ಕೆ ಏರಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಡಿ 23ರವರೆಗೆ ಒಟ್ಟು 17 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ.
‘ವಾಕಾರಿ/ವೈಟ್ ದ್ವೀಪದಲ್ಲಿ ಸ್ಫೋಟಿಸಿದ ಜ್ವಾಲಾಮುಖಿಯಿಂದ ಗಾಯಗೊಂಡು ಆಸ್ಟ್ರೇಲಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬ ವ್ಯಕ್ತಿ ಮೃತಪಟ್ಟಿರುವುದಾಗಿ ದೃಢಪಟ್ಟಿದೆÉ. ಇದರೊಂದಿಗೆ ಇದುವರೆಗೆ ಜ್ವಾಲಾಮುಖಿಯಿಂದ ಮೃತಪಟ್ಟವರ ಸಂಖ್ಯೆ 18ಕ್ಕೆ ಏರಿದೆ. ಈ ಪೈಕಿ 16 ಮಂದಿ ನ್ಯೂಜಿಲೆಂಡ್ ನಲ್ಲಿ 16 ಮಂದಿ, ಆಸ್ಟ್ರೇಲಿಯಾದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.’ ಎಂದು ಹೇಳಿಕೆ ತಿಳಿಸಿದೆ.
ಡಿಸೆಂಬರ್ 9ರಂದು ಜ್ವಾಲಾಮುಖಿ ಸ್ಫೋಟಿಸಿತ್ತು. ಇನ್ನೂ ಇಬ್ಬರು ನಾಪತ್ತೆಯಾಗಿದ್ದು, ಅವರು ಬದುಕುಳಿದಿರುವ ಸಾಧ್ಯತೆ ಕಡಿಮೆ ಎಂದು ಪೊಲೀಸರು ಹೇಳಿದ್ದಾರೆ. ಜ್ವಾಲಾಮುಖಿ ಪ್ರಬಲವಾಗಿರುವಾಗ ಪ್ರವಾಸಿಗರ ಭೇಟಿಗೆ ಅವಕಾಶ ನೀಡಿದ್ದೇಕೆ ಎಂಬ ಬಗ್ಗೆ ತನಿಖೆ ನಡೆಸುವಂತೆ ನ್ಯೂಜಿಲೆಂಡ್ ಪ್ರಧಾನಿ ಜಸಿಂದಾ ಆರ್ಡೆನ್ ಆದೇಶಿಸಿದ್ದಾರೆ.