ಹಳ್ಳದ ಜಮೀನು ಪ್ರಕರಣ ಬೆನ್ನಲ್ಲೇ ಶಿವರಾಜ್ ವಿರುದ್ಧ ಹೊಸ ಆರೋಪ! ರಸ್ತೆ ಅಗಲೀಕರಣಕ್ಕೆ ಮನೆ ಕಳೆದುಕೊಂಡ ಕುಟುಂಬಗಳ ಆಕ್ರೋಶ
New allegations against Shivaraj in wake of the Halla land case! Outrage from families who lost thei
ಬಳ್ಳಾರಿ 25: ಹಳ್ಳದ ಜಮೀನು ಮತ್ತೊಬ್ಬರಿಗೆ ಮಾರಾಟ ಮಾಡಿದ ಆರೋಪದ ಪ್ರಕರಣ ಇನ್ನೂ ಮಾಸುವ ಮುನ್ನವೇ, ಬಳ್ಳಾರಿ ಮಹಾನಗರ ಪಾಲಿಕೆಯ ಏಳನೇ ವಾರ್ಡಿನ ಕಾರ್ೋರೇಟರ್ ಪತಿ ಶಿವರಾಜ್ ವಿರುದ್ಧ ಇದೀಗ ಮತ್ತೊಂದು ಆರೋಪ ಕೇಳಿಬಂದಿದೆ.ವಾರ್ಡ್ ನಂ. 7 ಮತ್ತು 8ಕ್ಕೆ ಹೊಂದಿಕೊಂಡಿರುವ ರಸ್ತೆ ಅಗಲೀಕರಣ ಕಾಮಗಾರಿಯ ಹಿನ್ನೆಲೆ ಕಳೆದ ವರ್ಷ ರಸ್ತೆಯ ಒಂದು ಬದಿಯಲ್ಲಿದ್ದ ಇಪ್ಪತ್ತಕ್ಕೂ ಹೆಚ್ಚು ಕುಟುಂಬಗಳ ಮನೆಗಳನ್ನು ತೆರವುಗೊಳಿಸಲಾಗಿತ್ತು. ಆ ವೇಳೆ ಸಂತ್ರಸ್ತ ಕುಟುಂಬಗಳಿಗೆ ಬೇರೆಡೆ ನಿವೇಶನ ನೀಡುವುದಾಗಿ ಭರವಸೆ ನೀಡಲಾಗಿತ್ತು ಎನ್ನಲಾಗಿದೆ. ಆದರೆ ವರ್ಷ ಕಳೆದರೂ ಯಾವುದೇ ವಸತಿ ವ್ಯವಸ್ಥೆ ಮಾಡಿಲ್ಲ ಎಂದು ಕುಟುಂಬಗಳು ಆರೋಪಿಸಿವೆ.
ಇದೀಗ ರಸ್ತೆ ನಿರ್ಮಾಣ ಕಾಮಗಾರಿಗೆ ಮುಂದಾಗಿರುವ ಹಿನ್ನೆಲೆಯಲ್ಲಿ, ತಮಗೆ ಪರ್ಯಾಯ ನಿವೇಶನ ನೀಡುವವರೆಗೆ ರಸ್ತೆ ಕಾಮಗಾರಿ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಸಂತ್ರಸ್ತರು ಪಟ್ಟು ಹಿಡಿದಿದ್ದಾರೆ. ಇನ್ನೊಂದೆಡೆ, ಇದೇ ಸಂತ್ರಸ್ತರಿಗೆ ಹಳ್ಳದ ಜಮೀನಿನಲ್ಲೇ ನಿವೇಶನ ನೀಡುವುದಾಗಿ ಕಾಂಗ್ರೆಸ್ ಮುಖಂಡ ಶಿವರಾಜ್ ಹೇಳುತ್ತಿದ್ದಾರೆ ಎನ್ನುವ ಆರೋಪವೂ ಕೇಳಿಬಂದಿದೆ. ಆದರೆ ಆ ಜಾಗವನ್ನು ಈಗಾಗಲೇ ಜಿಲ್ಲಾಡಳಿತ ಒತ್ತುವರಿ ಪ್ರದೇಶವೆಂದು ಗುರುತಿಸಿ ತೆರವುಗೊಳಿಸಿರುವುದರಿಂದ, ಮತ್ತೆ ಅದೇ ಜಾಗದಲ್ಲಿ ನಿವೇಶನ ನೀಡಿದರೆ ಭವಿಷ್ಯದಲ್ಲಿ ಮತ್ತೊಮ್ಮೆ ತೆರವುಗೊಳ್ಳುವ ಭೀತಿ ಇದೆ ಎಂದು ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ.ಹೀಗಾಗಿ ಸುರಕ್ಷಿತ ಹಾಗೂ ಕಾನೂನುಬದ್ಧ ನಿವೇಶನ ಒದಗಿಸಬೇಕು. ಇಲ್ಲವಾದರೆ ರಸ್ತೆ ಕಾಮಗಾರಿ ನಡೆಸಲು ಬಿಡುವುದಿಲ್ಲ ಎಂದು ಸಂತ್ರಸ್ತ ಕುಟುಂಬಗಳು ಎಚ್ಚರಿಕೆ ನೀಡಿವೆ.
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 