ರಾಜ್ಯದಲ್ಲಿ ನೂತನ ಜೈವಿಕ ಇಂಧನ ನೀತಿ ಶೀಘ್ರ ಜಾರಿ: ಈ. ಎಸ್. ಸುಧೀಂದ್ರ
New biofuel policy to be implemented soon in the state: E. S. Sudhindra
ಗದಗ 20: ನಗರದ ಗ್ರಾಮೀಣಾಭಿವೃದ್ಧಿ ವಿವಿಯಲ್ಲಿ ಬುಧವಾರ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ವತಿಯಿಂದ ಬುಧವಾರ ಸದ್ಭಾವನ ದಿವಸ್, ಅಕ್ಷಯ ಊರ್ಜಾ ದಿವಸ್ ಮತ್ತು ವಿಶ್ವ ಜೈವಿಕ ಇಂಧನ ದಿನಾಚರಣೆ ಜರುಗಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಜೈವಿ ಮಂಡಳಿ ಅಧ್ಯಕ್ಷ ಈ.ಎಸ್. ಸುಧೀಂದ್ರ, ರಾಜ್ಯದಲ್ಲಿ ಈಗಾಗಲೇ ನೂತನ ಜೈವಿಕ ಇಂಧನ ನೀತಿಯ ರಚನೆಯ ಕುರಿತು ಎಲ್ಲಾ ಪೂರ್ವಭಾವಿ ಕಾರ್ಯ ಚಟುವಟಿಕೆಗಳನ್ನು ಪೂರ್ಣಗೊಳಿಸಿದೆ. ಶೀಘ್ರದಲ್ಲಿಯೇ ನೂತನ ಜೈವಿಕ ಇಂಧನ ನೀತಿಯು ರಾಜ್ಯ ಸರ್ಕಾರದಿಂದ ಘೋಷಣೆಯಾಗಲಿದೆ. ಈಗಾಗಲೇ ಅನುಷ್ಠಾನ ಪ್ರಕ್ರಿಯೆ ಮಾರ್ಗ ಸೂಚಿಗಳನ್ನು ಸಿದ್ಧಗೊಳಿಸಲಾಗಿದೆ ಎಂದು ಸುದೀಂಧ್ರ ತಿಳಿಸಿದರು.
ಮುಂದಿನ 5 ವರ್ಷಗಳಲ್ಲಿ 1 ಲಕ್ಷ ಕೋಟಿಗೂ ಹೆಚ್ಚಿನ ಬಂಡವಾಳ ಹೂಡಿಕೆ ಜೈವಿಕ ಇಂಧನ ಕ್ಷೇತ್ರದಲ್ಲಿ ನೀರೀಕ್ಷಿಸಲಾಗಿದೆ. 3 ಲಕ್ಷಕ್ಕೂ ಹೆಚ್ಚಿನ ಪ್ರತ್ಯಕ್ಷ ಹಾಗೂ ಪರೋಕ್ಷ ಉದ್ಯೋಗ ಸೃಜನೆ, ರೈತರ ಕುಟುಂಬಗಳ ಆದಾಯದ ಹೆಚ್ಚಳ, ಯುವ ಉದ್ದಿಮೆದಾರರಿಗೆ ಪ್ರೋತ್ಸಾಹ ದೊರೆಯಲಿದ್ದು, ಮುಂದಿನ ಐದು ವರ್ಷಗಳು ಕರ್ನಾಟಕ ರಾಜ್ಯದಲ್ಲಿ ಜೈವಿಕ ಇಂಧನ ಕ್ಷೇತ್ರದ ಅಭಿವೃದ್ಧಿಯಲ್ಲಿ ನಿರ್ಣಾಯಕವಾಗಲಿದೆ ಎಂದರು.ರಾಜ್ಯ ಸರ್ಕಾರ ರೀನೀವಬಲ್ ಎನರ್ಜಿಗಳಾದ ಸೋಲಾರ್, ವಿಂಡ್ ಎನರ್ಜಿ ಕ್ಷೇತ್ರದಲ್ಲಿ ರಾಜ್ಯವು ಉತ್ತಮ ಸಾಧನೆ ಮಾಡಲು ಈಗಾಗಲೇ ಹಲವಾರು ಕಾರ್ಯಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಿದೆ. ಪ್ರಸ್ತುತ ಜೈವಿಕ ಇಂಧನ ಕ್ಷೇತ್ರದ ಅಭಿವೃದ್ಧಿಗೂ ಸರ್ಕಾರ ಆಸಕ್ತಿ ತೋರಿದೆ. ನೂತನ ಜೈವಿಕ ಇಂಧನ ನೀತಿಯು ಈ ಕ್ಷೇತ್ರದ ಅಭಿವೃದ್ಧಿಗೆ ವೇಗವರ್ಧಕವಾಗಲಿದೆ ಎಂದು ಅಧ್ಯಕ್ಷ ಸುಧೀಂದ್ರ ಹೇಳಿದರು.ಸದ್ಭಾವನಾ ದಿವಸ್ ಹಾಗೂ ಊರ್ಜಾ ದಿವಸ್ 21ನೇ ಶತಮಾನದ ವಿಜ್ಞಾನ, ತಂತ್ರಜ್ಞಾನ, ಮಾಹಿತಿ ಹಾಗೂ ಜೀವ ವಿಜ್ಞಾನಕ್ಕೆ ಮುನ್ನುಡಿ ಬರೆದ ದಿನಾಚರಣೆ. ರಾಷ್ಟ್ರೀಯ ಐಕ್ಯತೆ, ಸಾಮಾಜಿಕ ಸೌಹಾರ್ದತೆ ಮತ್ತು ಸಹಿಷ್ಣತೆ ಕುರಿತು ಜನತೆಯಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವುದು ಈ ಊರ್ಜಾ ದಿವಸ್ ಮುಖ್ಯ ಉದ್ದೇಶವಾಗಿದೆ. ರೀನೀವಬಲ್ ಎನರ್ಜಿ ಕುರಿತು ಮುಖ್ಯವಾಗಿ ವಿದ್ಯಾರ್ಥಿಗಳಿಗೆ ಅರಿವು ಮತ್ತು ಜಾಗೃತಿ ಮೂಡಿಸುವುದಾಗಿದೆ. ಈ ವಿಶ್ವ ಜೈವಿಕ ಇಂಧನ ದಿನಾಚರಣೆಯ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯು ರಾಜ್ಯದಲ್ಲಿ ಜೈವಿಕ ಇಂಧನ ಕುರಿತು ಈಗಾಗಲೇ ಅರಿವು ಮತ್ತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನ ಗೊಳಿಸಲಾಗುತ್ತಿದೆ. ಪ್ರಸ್ತುತ ಸನ್ನಿವೇಶದಲ್ಲಿ ಜೈವಿಕ ಇಂಧನ ಕ್ಷೇತ್ರದ ಉನ್ನತಿಕರಣ ಮತ್ತು ವಾಣಿಜ್ಯೀಕರಣ ಅತ್ಯಗತ್ಯವಾಗಿದೆ ಬೇರೆ ಬೇರೆ ರಾಜ್ಯಗಳಲ್ಲಿ ಜೈವಿಕ ಇಂಧನ ಕ್ಷೇತ್ರದಲ್ಲಿ ಗಣನೀಯವಾಗಿ ಜೈವಿಕ ಇಂಧನ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದು ಮಂಡಳಿಯೂ ಸಹ ಈ ದಿಶೆಯಲ್ಲಿ ಕಾರ್ಯಯೋಜನೆ ರೂಪಿಸುವುದು ಅನಿವಾರ್ಯವಾಗಿದೆ ಎಂದು ಈ ಎಸ್ ಸುಧೀಂದ್ರ ಎಂದರು.ಗದಗ ಅರಣ್ಯ ಸಂರಕ್ಷಾಧಿಕಾರಿ ಸಂತೋಷ ಕೆಂಚಪ್ಪಣ್ಣವರ ಮಾತನಾಡಿ, ದೇಶದಲ್ಲಿ ಹಸಿರು ಕ್ರಾಂತಿ, ಕ್ಷೀರ ಕ್ರಾಂತಿ ನಡೆದಿದೆ. ಈಗ ಜೈವಿಕ ಕ್ರಾಂತಿ ನಡೆದಿರುವುದು ದೇಶದ ಅಭಿವೃದ್ಧಿಗೆ ಪೂರಕ ಆಗಲಿದೆ. ಈ ಮೊದಲು ಗಿಡಮರಗಳಿಂದ ಉತ್ಪದಾನೆ ಆಗುವ ಇಂಧನಗಳಿಗೆ ಮಾತ್ರ ಪ್ರಾಮುಖ್ಯತೆ ನೀಡಲಾಗುತ್ತಿತ್ತು. ಇತ್ತೀಚಿಗೆ ಕಬ್ಬಿನಿಂದ ಎಥೆನಾಲ್ ಉತ್ಪಾದನೆ ಹೆಚ್ಚಾಗುತ್ತಿದೆ.
ಕಬ್ಬಿನ ಕಸದಿಂದ ಸುಟ್ಟು ಬರುವ ಕಚ್ಚಾ ವಸ್ತುಗಳಿಂದ ವಿದ್ಯುತ್ ಉತ್ಪಾದನೆ ಆಗುತ್ತಿದೆ. ಸಕ್ಕರೆ ಕಾರ್ಖಾನೆಗಳಿಂದ ಜೈವಿಕ ಇಂಧನ ಅಧಿಕ ಉತ್ಪಾದನೆ ಆಗುತ್ತಿರುವುದು ಇಂಧನ ವಲಯಕ್ಕೆ ಶಕ್ತಿ ತುಂಬಿದೆ. ಪುನರ್ಬಳಕೆ ಇಂಧನ ಬಳಕೆ ಇತ್ತೀಚಿನ ದಿನಗಳಲ್ಲಿ ಅಧಿಕವಾಗುತ್ತಿದೆ. ಪರಿಸರ ರಕ್ಷಣೆ ಮತ್ತು ಸಂಪನ್ಮೂಲಗಳ ಸಮರ್ಕ ಬಳಕೆಯಿಂದ ಪುನರ್ಬಳಕೆ ಇಂಧನ ಉದ್ದೇಶ ಸಾಕಾರವಾಗಲಿದೆ. ಜೈವಿಕ ಇಂಧನದಿಂದ ವಿದೇಶದಿಂದ ಇಂಧನ ಆಮದು ಕಡಿಮೆ ಆಗಲಿದೆ. ಜೈವಿಕ ಇಂಧನದಿಂದ ಹಸರೀಕರಣ ಹೆಚ್ಚಾಗಲಿದೆ ಎಂದರು ಸಂತೋಷ ಕೆಂಚಪ್ಪನ್ನವರ ಹೇಳಿದರು.ಯುವಕ, ಯುವತಿಯರು ಉದ್ಯಮಶೀಲತೆ ಬೆಳಸಿಕೊಂಡು ಇತರರಿಗೆ ಉದ್ಯೋಗ ನೀಡಬೇಕು. ಎಲ್ಲರೂ ಒಗ್ಗಟ್ಟಾಗಿದ್ದರೆ ಸಾಧನೆ ಮಾಡಬಹುದು. ನಮ್ಮನ್ನು ವಿಭಜಿಸುವ ಶಕ್ತಿಗಳಿಂದ ಎಚ್ಚರ ಇರಬೇಕು. ವಿಭಜಿಸುವ ಶಕ್ತಿಯನ್ನು ನಾಶ ಮಾಡಿ ಸಾಧನೆಗೆ ಗಮನ ಕೊಡಬೇಕು. ಅಂದಾಗ ಮಾತ್ರ ಸದ್ಭಾವನ ದಿವಸ ಆಚರಣೆ ಸಾರ್ಥಕ ಆಗುತ್ತದೆ ಎಂದರು.ಜೈವಿಕ ಇಂಧನ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ ಮಾತನಾಡಿ, ಶುಚಿತ್ವಕ್ಕೆ ಮೊದಲ ಆದ್ಯತೆ ನೀಡಬೇಕು. ಮುಂದಿನ 30 ವರ್ಷಗಳಲ್ಲಿ ಭಾರತ ಬಲಿಷ್ಠ ರಾಷ್ಟ್ರವಾಗಲಿದೆ. ಇಂದಿನ ವಿದ್ಯಾರ್ಥಿಗಳು ಬಲಿಷ್ಠ ರಾಷ್ಟ್ರದ ಭಾಗ ಆಗಲಿದ್ದಾರೆ. ಹಾಗಾಗಿ ಇಂದಿನ ವಿದ್ಯಾರ್ಥಿಗಳು ಸಂಪನ್ಮೂಲ ಗಳ ಸಮರ್ಕ ಬಳಕೆಗೆ ಒತ್ತು ನೀಡಬೇಕು. ಬದುಕಿಗೆ ಆಹಾರ, ವಸತಿ, ಶಿಕ್ಷಣ ಎಷ್ಟು ಮುಖ್ಯವೋ ಶಕ್ತಿಯು ಅಷ್ಟೇ ಮುಖ್ಯ. ಇಂಧನ ಶಕ್ತಿ ಇಂದು ಅಗತ್ಯತೆಗಳಲ್ಲಿ ಒಂದಾಗಿದೆ. ಜೈವಿಕ ಪುನರ್ಬಳಕೆ ಇಂಧನವು ಭವಿಷ್ಯದಲ್ಲಿ ಅನಿವಾರ್ಯತೆ ಆಗಲಿದೆ ಎಂದು ಹೇಳಿದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಡಾ.ಸುರೇಶ್.ವಿ ನಾಡಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿದ್ಯಾಲಯದ ವಿತ್ತಾಧಿಕಾರಿ ಪ್ರಶಾಂತ್ ಜೆ.ಸಿ, ಜೈವಿಕ ಇಂಧನ ಸಂಶೋಧನೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕೇಂದ್ರದ ಸಂಯೋಜಕರಾದ ಡಾ. ರವಿ ಜಡೆ, ಸಹಾಯಕ ನಿರ್ದೇಶಕ ಗೀರೀಶ್ ದಿಕ್ಷಿತ್, ವಿದ್ಯಾರ್ಥಿಗಳು ಇದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 