ಕುಸೂರಿನ ಸರಕಾರಿ ಶಾಲೆಗೆ ನೂತನ ತರಗತಿ ಕೊಠಡಿ ಉದ್ಘಾಟನೆ

ಕುಸೂರಿನ ಸರಕಾರಿ ಶಾಲೆಗೆ ನೂತನ ತರಗತಿ ಕೊಠಡಿ ಉದ್ಘಾಟನೆ  New classroom inaugurated at Kusur government school

ಲೋಕದರ್ಶನ ವರದಿ  

ಮುಂಡಗೋಡ 24 : ತಾಲೂಕಿನ ಕುಸೂರ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಲಾದ ತರಗತಿ ಕೊಠಡಿಯನ್ನು ಶಾಸಕ ಶಿವರಾಮ ಹೆಬ್ಬಾರ್ ಅವರು ಇಂದು ಉದ್ಘಾಟಿಸಿದರು. ಸುಮಾರು 13.85 ಲಕ್ಷ ವೆಚ್ಚದಲ್ಲಿ ದುರ್ಗಾದೇವಿ ಟ್ರಸ್ಟ್‌ ಕಮಿಟಿ ವತಿಯಿಂದ ಈ ತರಗತಿ ಕೊಠಡಿ ನಿರ್ಮಿಸಲ್ಪಟ್ಟಿದ್ದು, ಶಾಲೆಯ ಮೂಲಸೌಕರ್ಯ ವೃದ್ಧಿಗೆ ಇದು ಮಹತ್ವದ ಕೊಡುಗೆಯಾಗಿದೆ.

ನೂತನ ಕೊಠಡಿಯಿಂದ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ದೊರೆಯಲಿದೆ. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಶಿವರಾಮ ಹೆಬ್ಬಾರ್ ಅವರು, “ದುರ್ಗಾದೇವಿ ಟ್ರಸ್ಟ್‌ ಕಮಿಟಿಯ ಸಾಮಾಜಿಕ ಸೇವೆ ಶ್ಲಾಘನೀಯ. ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದೊಂದಿಗೆ ಸಮಾಜದ ಸಹಭಾಗಿತ್ವ ಅಗತ್ಯವಾಗಿದ್ದು, ಇಂತಹ ಕಾರ್ಯಗಳು ಇತರ ಸಂಸ್ಥೆಗಳಿಗೂ ಪ್ರೇರಣೆಯಾಗಬೇಕು,” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ಟ್ರಸ್ಟ್‌ ಸದಸ್ಯರು, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.