ಉದ್ಯೋಗ ಖಾತರಿ ಯೋಜನೆಯಡಿ ಕೂಲಿಕಾರರಿಗೆ ಹೊಸ ಜಾಬ್ ಕಾರ್ಡ: ಕುಮಾರ್ ಪೂಜಾರ್
New job cards for workers under the employment guarantee scheme: Kumar Pujar
ಗದಗ, ಆಗಸ್ಟ್ 28: ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ) ಯೋಜನೆಯಡಿ ನೋಂದಣಿಯಾಗದ ಕೂಲಿಕಾರರು ಗ್ರಾಮ ಪಂಚಾಯಿತಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಹೊಸ ಜಾಬ್ ಕಾರ್ಡ್ ಪಡೆದುಕೊಳ್ಳಬೇಕು ಎಂದು ತಾಪಂ ನಿರ್ದೇಶಕ (ವಿಬಿಜಿ-ರಾಮ್ಜಿ) ಕುಮಾರ್ ಪೂಜಾರ್ ಹೇಳಿದರು.
ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ದಂಡಿನ ದುರ್ಗಾದೇವಿ ಕೆರೆಯಿಂದ ಮೊಟ ಬಸಪ್ಪ ಗುಡಿಯವರೆಗೆ ನೀರು ಹರಿಯುವ ಕೊಡಿ ಅಭಿವೃದ್ಧಿಪಡಿಸುವ ಕಾಮಗಾರಿ ಸ್ಥಳ ಪರೀಶೀಲನೆ ನಡೆಸಿದ ಅವರು, ಶುಕ್ರವಾರ ಆಯೋಜಿಸಿದ್ದ ‘ಜಾಬ್ ಕಾರ್ಡ್ ಮೇಳ’ದಲ್ಲಿ ಮಾತನಾಡಿದರು.
ವಿಬಿಜಿ-ರಾಮ್ಜಿ ಯೋಜನೆಯಡಿ ಕೆಲಸಕ್ಕೆ ಹಾಜರಾಗುವಂತೆ ಹಾಗೂ ವೈಯಕ್ತಿಕ ಕಾಮಗಾರಿಗಳನ್ನು ಕೈಗೊಳ್ಳುವಂತೆ ಅರ್ಹರಿಗೆ ಮಾಹಿತಿ ನೀಡಲಾಗುತ್ತಿದೆ. ಆದ್ಯತೆಯ ಮೇರೆಗೆ ಶೇ.100ರಷ್ಟು ಕೆಲಸ ಒದಗಿಸುವ ಉದ್ದೇಶದಿಂದ ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಹಂತದಲ್ಲಿ ಕ್ರಿಯಾ ಯೋಜನೆಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು.
ಜಾಬ್ ಕಾರ್ಡ್ ಮೇಳದಲ್ಲಿ ಈಗಾಗಲೇ ಪಂಚಾಯಿತಿಯಲ್ಲಿ ಹಲವು ಮಂದಿಯ ಹೊಸ ಜಾಬ್ ಕಾರ್ಡ್ಗೆ ನೋಂದಣಿ ಮಾಡಲಾಗಿದೆ. ಕೆಲ ಕುಟುಂಬಗಳ ವಿಭಜನೆ ಸೇರಿದಂತೆ ವಿವಿಧ ಕಾರಣಗಳಿಂದ ಉಂಟಾಗಿರುವ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲಾಗುವುದು ಎಂದರು.
ಗ್ರಾಪಂ ಅಭಿವೃದ್ಧಿ ಅಧಿಕಾರಿ ಅಮೀರ್ ನಾಯಕ್ ಮಾತನಾಡಿ, ಜಾಬ್ ಕಾರ್ಡ್ ಹೊಂದಿರುವ ಪ್ರತಿಯೊಂದು ಗ್ರಾಮೀಣ ಕುಟುಂಬವು ವರ್ಷದಲ್ಲಿ 125 ದಿನಗಳ ಕೆಲಸ ಪಡೆಯುವ ಕಾನೂನುಬದ್ಧ ಹಕ್ಕು ಹೊಂದಿದೆ.
ವಲಸೆ ಹೋಗಿ ಸಂಕಷ್ಟ ಅನುಭವಿಸುವ ಅಗತ್ಯವಿಲ್ಲ. ತಮ್ಮ ಸ್ವಂತ ಊರಿನಲ್ಲೇ ವಿಬಿಜಿ-ರಾಮ್ಜಿ ಯೋಜನೆಯಡಿ ಸಕ್ರಿಯವಾಗಿ ಭಾಗವಹಿಸಿ ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ತಾಪಂ ಎಎಸ್‌ಐ ಸಂಯೋಜಕ ವೀರೇಶ್ ಬಸನಗೌಡ್ರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 