ಮೈಲಾರ ಮಹದೇವಪ್ಪ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ಗೆ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ
New office bearers assume charge at the Mailara Mahadevappa National Memorial Trust
ಲೋಕದರ್ಶನ ವರದಿ
ಹಾವೇರಿ, ಸೆ. 07: ಹುತಾತ್ಮ ಮೈಲಾರ ಮಹದೇವಪ್ಪನವರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ನ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಕಾರ್ಯಕ್ರಮ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಟ್ರಸ್ಟ್ನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಂಜೀವಕುಮಾರ ನೀರಲಗಿ ಮಾತನಾಡಿ, ಟ್ರಸ್ಟ್ನ ಜವಾಬ್ದಾರಿ ಹಾಗೂ ಹೊಣೆಗಾರಿಕೆ ಹೆಚ್ಚಿದೆ. ಟ್ರಸ್ಟ್ನ ಎಲ್ಲ ಸದಸ್ಯರು ಒಗ್ಗಟ್ಟಿನಿಂದ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಹಾಗೂ ಸ್ಮಾರಕ ನಿರ್ಮಾಣದ ಕಾರ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಹೇಳಿದರು.
ಹಾವೇರಿ ನಗರದ ಮೈಲಾರ ಮಹದೇವಪ್ಪನವರ ವೃತ್ತವನ್ನು ?50 ಲಕ್ಷ ಅನುದಾನದಲ್ಲಿ ನವೀಕರಿಸಿ ಸುಂದರೀಕರಣಗೊಳಿಸುವ ಯೋಜನೆ ರೂಪಿಸಲಾಗಿದೆ. ಅಲ್ಲದೆ, ಹಾವೇರಿ ನಗರದಲ್ಲಿ ಐದು ಎಕರೆ ಜಾಗದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ವಸ್ತುಸಂಗ್ರಹಾಲಯ ನಿರ್ಮಿಸುವ ಉದ್ದೇಶವಿದೆ. ಮುಂದಿನ ದಿನಗಳಲ್ಲಿ ಟ್ರಸ್ಟ್ ವತಿಯಿಂದ ಹತ್ತಾರು ಕಾರ್ಯಕ್ರಮಗಳನ್ನು ರೂಪಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಲಾಗುವುದು ಎಂದು ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಟ್ರಸ್ಟ್ ರಚನೆಗೆ ಕಾರಣಕರ್ತರಾದ ವಿ.ಎನ್. ತಿಪ್ಪನಗೌಡ ಅವರನ್ನು ಸ್ಮರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರೊ. ಪ್ರೇಮಾನಂದ ಲಕ್ಕಣ್ಣವರ, ಮಹಾತ್ಮ ಗಾಂಧೀಜಿ ಹಾಗೂ ಜವಾಹರಲಾಲ್ ನೆಹರು ಅವರ ನಂತರ ಮೈಲಾರ ಮಹದೇವಪ್ಪನವರು ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದವರು ಎಂದು ಹೇಳಿದರು. ಅವರ ತ್ಯಾಗ ಮತ್ತು ಬಲಿದಾನವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸ ನಡೆಯಬೇಕು ಎಂದರು.
ಕಾರ್ಯಕ್ರಮದ ಆರಂಭದಲ್ಲಿ ಟ್ರಸ್ಟ್ನ ಸದಸ್ಯರಾಗಿದ್ದ ಡಾ. ಜಿ.ವಿ. ಕಲಕೋಟಿ ಅವರು ನಿಧನರಾದ ಹಿನ್ನೆಲೆಯಲ್ಲಿ ಒಂದು ನಿಮಿಷ ಮೌನಾಚರಣೆ ನಡೆಸಲಾಯಿತು. ಟ್ರಸ್ಟ್ನ ಸದಸ್ಯರಾದ ಎಚ್.ಎಸ್. ಮಹದೇವಪ್ಪ, ಮನೋಹರ ಮಲ್ಲಾಡದ, ದೀಪಾ ಗೋನಾಳ, ಡಾ. ನಿಂಗಪ್ಪ ಚಳ್ಳಗೇರಿ, ಗಣೇಶ ಪೂಜಾರ, ಶಿವು ತಳವಾರ, ಅಬ್ದುಲ್ ಹುಬ್ಬಳ್ಳಿ ಹಾಗೂ ಪ್ರೇಮಾನಂದ ಲಕ್ಕಣ್ಣವರ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ. ಸ್ವಾಗತಿಸಿದರು. ಅಬ್ದುಲ್ ಹುಬ್ಬಳ್ಳಿ ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 