ಕರ್ನಾಟಕ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
New office bearers elected for Karnataka Journalists Association
ಯಲಬುರ್ಗಾ 23 : ಕರ್ನಾಟಕ ಪತ್ರಕರ್ತರ ಸಂಘದ ಯಲಬುರ್ಗಾ ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ಶಿವಮೂರ್ತಿ ಇಟಗಿ , ಪ್ರಧಾನ ಕಾರ್ಯದರ್ಶಿಯಾಗಿ ಶಿವುಕುಮಾರ್ ಮ್ಯಾಗೇರಿ ಆಯ್ಕೆಯಾಗಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಜಿಲ್ಲಾ ಅಧ್ಯಕ್ಷ ಶರಣಪ್ಪ ಗುಮಗೇರಿ ಅವರ ಅಧ್ಯಕ್ಷತೆಯಲ್ಲಿ ನೂತನ ತಾಲೂಕು ಅಧ್ಯಕ್ಷರು ಹಾಗೂ ಅವರ ಪದಾಧಿಕಾರಿಗಳ ಆಯ್ಕೆ ಸಭೆ ನಡೆಯಿತು. ಈ ವೇಳೆ ಗೌರವ ಅಧ್ಯಕ್ಷ ಹಾಗೂ ಜಿಲ್ಲಾ ಕಾರ್ಯಕಾರಣಿ ಸದಸ್ಯರಾಗಿ ಸಶರಣಪ್ಪ ಪಾಟೀಲ್, ಉಪಾಧ್ಯಕ್ಷರಾಗಿ ದೇವರಾಜ ದೊಡ್ಡಮನಿ, ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಅಧಿಕೃತವಾಗಿ ಘೋಷಿಸಿದರು. ನೂತನ ಆಯ್ಕೆಯಾದ ಸದಸ್ಯರಿಗೆ ಜಿಲ್ಲಾ ಅಧ್ಯಕ್ಷ ಶರಣಪ್ಪ ಗುಮಗೇರಿ ಅವರು ಸನ್ಮಾನಿಸಿ ಗೌರವಿಸಿದರು. ಈ ವೇಳೆ ಪದಾಧಿಕಾರಿಗಳಾಗಿ ಆಯ್ಕೆಯಾದ ರವಿಕುಮಾರ್ ಚಲವಾದಿ, ವೀರೇಶ ಸ್ಟಾಂಪಿನ, ಕಳಕೇಶ, ಶರಣಪ್ಪ, ಮೌನೇಶ, ದುರಗೇಶ್ ಅವರು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 