ಎಸ್ಎಫ್ಐ ಹಾವೇರಿ ಜಿಲ್ಲಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ
New office bearers elected for SFI Haveri District Committee
ಹಾವೇರಿ, ಆ.27: ಸಮಾನ ಗುಣಮಟ್ಟದ ಶಿಕ್ಷಣ, ಪ್ರಜಾಪ್ರಭುತ್ವದ ರಕ್ಷಣೆ, ಜಿಲ್ಲೆಯ ಸೌಹಾರ್ದತೆ ಹಾಗೂ ಸಮಗ್ರ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುತ್ತಿರುವ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಹಾವೇರಿ ಜಿಲ್ಲಾ ವಿದ್ಯಾರ್ಥಿಗಳ 9ನೇ ಜಿಲ್ಲಾ ಸಮ್ಮೇಳನದ ಪ್ರತಿನಿಧಿ ಅಧಿವೇಶನದಲ್ಲಿ ನೂತನ ಜಿಲ್ಲಾ ಸಮಿತಿಯನ್ನು ಆಯ್ಕೆ ಮಾಡಲಾಯಿತು.
ನಗರದ ಸರ್ಕಾರಿ ನೌಕರರ ಭವನದಲ್ಲಿ ನಡೆದ ಸಮ್ಮೇಳನದಲ್ಲಿ ದೇಣಿಗೆ ಹಾವಳಿ ತಡೆಗಟ್ಟುವುದು, ಜಿಲ್ಲೆಯ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಸ್ವಂತ ಕಟ್ಟಡ ಹಾಗೂ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು, ಕಾನೂನು ಕಾಲೇಜು ಕೂಡಲೇ ಆರಂಭಿಸುವುದು, ಆರ್ಟಿಇ ಕಾಯ್ದೆಯನ್ನು ಸಮರ್ಕವಾಗಿ ಜಾರಿಗೊಳಿಸುವುದು ಸೇರಿದಂತೆ ಹಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು.
ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹೊಸ ಹಾಸ್ಟೆಲ್ಗಳನ್ನು ಮಂಜೂರು ಮಾಡಬೇಕು, ಹಾಸ್ಟೆಲ್ಗಳ ವ್ಯವಸ್ಥೆಯನ್ನು ಬಲಪಡಿಸಬೇಕು, ಶಾಲಾ-ಕಾಲೇಜುಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಬೇಕು ಎಂದು ಸಮ್ಮೇಳನ ಆಗ್ರಹಿಸಿತು.
ಜಿಲ್ಲಾ ಕೇಂದ್ರ ಸೇರಿದಂತೆ ಪ್ರಮುಖ ತಾಲೂಕು ನಗರಗಳಲ್ಲಿ ನಗರ ಸಾರಿಗೆ ವ್ಯವಸ್ಥೆ ಆರಂಭಿಸಿ, ಸೂಕ್ತ ಸಾರಿಗೆ ಕಲ್ಪಿಸಬೇಕು. ವಿದ್ಯಾರ್ಥಿನಿಯರ ಮೇಲಿನ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ, ಅವರಿಗೆ ಸೂಕ್ತ ರಕ್ಷಣೆ ನೀಡಬೇಕು.
ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಬೇಕು ಹಾಗೂ ಲೈಂಗಿಕ ಕಿರುಕುಳ ವಿರೋಧಿ ಸಮಿತಿಗಳನ್ನು ರಚಿಸಬೇಕು. ಜಿಲ್ಲೆಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಸರ್ಕಾರವನ್ನು ಒತ್ತಾಯಿಸುವ ನಿರ್ಣಯಗಳನ್ನು ಅಂಗೀಕರಿಸಲಾಯಿತು.
ಈ ನಿರ್ಣಯಗಳ ಜಾರಿಗಾಗಿ 31 ಸದಸ್ಯರ ನೂತನ ಜಿಲ್ಲಾ ಸಮಿತಿಯನ್ನು ರಚಿಸಲಾಯಿತು. ಎಸ್ಎಫ್ಐ ಹಾವೇರಿ ಜಿಲ್ಲಾ ಸಮಿತಿಯ ನೂತನ ಜಿಲ್ಲಾಧ್ಯಕ್ಷರಾಗಿ ಅರುಣ್ ಕುಮಾರ್ ನಗವತ, ಜಿಲ್ಲಾ ಕಾರ್ಯದರ್ಶಿಯಾಗಿ ಚೈತ್ರಾ ಕೊರವರ ಆಯ್ಕೆಯಾದರು.
ಉಪಾಧ್ಯಕ್ಷರಾಗಿ ಶಂಭುಲಿಂಗ ಸವದತ್ತಿ, ದ್ಯಾಮಣ್ಣ ಆರೇರ, ಸಿಂಧೂ ತಳವಾರ, ವೀರನಗೌಡ ಹಾಗೂ ಸಹ ಕಾರ್ಯದರ್ಶಿಗಳಾಗಿ ಪರಶುರಾಮ ಎಸ್., ಶೋಭಾ ದೇವರಮನೆ, ದೀಪಾ, ಶರಣು, ಪೂಜಾ ಬಾರ್ಕಿ ಆಯ್ಕೆಯಾದರು.
ಸಮಿತಿ ಸದಸ್ಯರಾಗಿ ನಂಜುಂಡಿ ಬಲಿಗಾರ, ವಿಕಾಸ ದುರ್ಗಣ್ಣವರ, ಮಲ್ಲಿಕಾ ರೆಹನಾ, ಪ್ರಿಯಾಂಕಾ, ಸೂರೈ ಭಾನು, ಗುರುಕಿರಣ್, ಮಹೇಶ್ವರಿ ಎನ್.ಪಿ., ಉಮಾ ಹಾವೇರಿ, ತನೂಜಾ ಹೊಂಬರಡಿ, ಪೂಜಾ ವೈ.ಎಸ್., ಉದಯ ಖಾಜಿ, ಆದಿಲ್ ಷಾ ಬಸನಹಾಳ, ಖಲಂದರ್ ಕರ್ಜಗಿ, ಮೊಹಮ್ಮದ್ ಯಾಸಿನ್, ಅರ್ಜುನ್ ಲಮಾಣಿ ಹಾಗೂ ಜಯಪ್ಪ ಗೌಡ ಸೇರಿದಂತೆ ಹಲವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಎಸ್ಎಫ್ಐ ರಾಜ್ಯಾಧ್ಯಕ್ಷ ಶಿವಪ್ಪ ಅಂಬ್ಲಿಕಲ್ ಹಾಗೂ ರಾಜ್ಯ ಉಪಾಧ್ಯಕ್ಷ ಬಸವರಾಜ ಎಸ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 