ಮಾರುತೇಶ್ವ ದೇವರ ನೂತನ ಶಿಲಾಮೂರ್ತಿ ಪ್ರಾಣ ಪ್ರತಿಷ್ಠಾಪನೆ
New stone statue of Lord Maruteshwa inaugurated
ವಿಜಯಪುರ 14 : ನೀರಾವರಿಗಾಗಿ ಭೂಮಿ ಕಳೆದುಕೊಂಡ ನಿರಾಶ್ರಿತರ ಕಣ್ಣೀರು ಒರೆಸುವ ಕೆಲಸವನ್ನು ಸರಕಾರ ಮಾಡುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ಇಂದು ಶನಿವಾರ ಬಬಲೇಶ್ವರ ತಾಲೂಕಿನ ಹೊಳೆಜೈನಾಪುರ ಗ್ರಾಮದಲ್ಲಿ ಲಕ್ಷ್ಮಿದೇವಿ, ಈಶ್ವರ, ನಂದಿ ಮತ್ತು ಮಾರುತೇಶ್ವ ದೇವರ ನೂತನ ಶಿಲಾಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಹಾಗೂ ಧರ್ಮಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಯುಕೆಪಿ 3ನೇ ಹಂತದ ಭೈಸ್ವಾಧೀನವಾಗಲಿರುಬ ಜಮೀನುಗಳ ರೈತರಿಗೆ ಒಪ್ಪಂದದಂತೆ ಪರಿಹಾರ ಚೆಕ್ ವಿತರಣೆ ಕಾರ್ಯಕ್ಕೆ ಬಾಗಲಕೋಟೆಯಲ್ಲಿ ಚಾಲನೆ ನೀಡಲಾಗಿದೆ. ಈ ಮೂಲಕ ನಿರಾಶ್ರೀತರ ಕಣ್ಣೀರು ಒರೆಸುವ ಕೆಲಸವನ್ನು ಸರಕಾರ ಮಾಡುತ್ತಿದೆ ಎಂದು ಅವರು ಹೇಳಿದರು. ಜಿಲ್ಲೆಯಲ್ಲಿ ಶಿಕ್ಷಣ, ಉದ್ಯೋಗ ಮತ್ತು ಅಭಿವೃದ್ಧಿಗೆ ಒತ್ತು ನೀಡುತ್ತಿದ್ದೇವೆ.
ಜೈನಾಪುರ ಗ್ರಾಮಸ್ಥರ ಬೇಡಿಕೆಗಳಿಗೆ ಸ್ಪಂದಿಸಲಾಗುವುದು. ಗ್ಯಾರಂಟಿ ಯೋಜನೆಗಳ ಸಮರ್ಕ ಅನುಷ್ಠಾನದ ಜೊತೆಯಲ್ಲಿಯೇ ಸರಕಾರ ಬಡವರು, ರೈತರು, ಮಹಿಳೆಯರು, ಯುವಕರು ಸೇರಿದಂತೆ ಎಲ್ಲರ ಕಲ್ಯಾಣಕ್ಕಾಗಿ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಮಮದಾಪುರ ಹೋಬಳಿಗೆ ಅಭಿವೃದ್ಧಿಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದೆ. ವೈವಿದ್ಯತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತದಲ್ಲಿ ಸಂಸ್ಕೃತಿ, ಪ್ರಕೃತಿ ಮತ್ತು ದೈವಾರಾಧನೆಗಳೂ ಸಮಾಜದ ಅವಿಭಾಜ್ಯ ಅಂಗಗಳಾಗಿವೆ. ಹೊಳೆಜೈನಾಪುರದಲ್ಲಿ ಮೂರ್ತಿಗಳ ಪ್ರತಿಷ್ಠಾಪನೆ ಗ್ರಾಮಸ್ಥರ ದೈವಭಕ್ತಿಗೆ ಸಾಕ್ಷಿಯಾಗಿದೆ ಎಂದು ಸಚಿವರು ಹೇಳಿದರು.
ಇದೇ ವೇಳೆ ಗ್ರಾಮಸ್ಥರು ಸಚಿವ ಎಂ. ಬಿ. ಪಾಟೀಲ ಅವರನ್ನು ಬಾಳೆಹಣ್ಣುಗಳಿಂದ ತುಲಾಭಾರ ನಡೆಸುವ ಮೂಲಕ ಧನ್ಯತೆ ಅರ್ಿಸಿದರು.ಈ ಸಂದರ್ಭದಲ್ಲಿ ಜಿ. ಪಂ. ಮಾಜಿ ಅಧ್ಯಕ್ಷ ಬಸವರಾಜ ದೇಸಾಯಿ, ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಕುಮಾರ ದೇಸಾಯಿ, ಮುಖಂಡರಾದ ಪ್ರಶಾಂತ ಹಿರೇದೇಸಾಯಿ, ಜಗನ್ನಾಥ ಹಿರೇದೇಸಾಯಿ, ಭೀಮಶಿ ನಾಗರಾಳ, ಬಸಪ್ಪ ಕೊಡೆಕಲ್, ಶ್ರೀನಿವಾಸ ನಿಡೋಣಿ, ಅಮೀನ ಬಿದರಿ, ಲಕ್ಕಪ್ಪ ಅಂಬಿಗೇರ,ಮುತ್ತಪ್ಪ ಮಂಟೂರ, ದೇವಸ್ಥಾನದ ಪ್ರಮುಖರು, ಗ್ರಾಮಸ್ಥರು, ಹಿರಿಯರು, ಮಹಿಳೆಯರು, ಯುವಕರು ಉಪಸ್ಥಿತರಿದ್ದರು.
ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಹೊಳೆಜೈನಾಪುರ ಗ್ರಾಮದಲ್ಲಿ ಲಕ್ಷ್ಮಿದೇವಿ, ಈಶ್ವರ, ನಂದಿ ಮತ್ತು ಮಾರುತೇಶ್ವ ದೇವರ ನೂತನ ಶಿಲಾಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಹಾಗೂ ಧರ್ಮಸಭೆ ಕಾರ್ಯಕ್ರಮದಲ್ಲಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಪಾಲ್ಗೊಂಡು ಮಾತನಾಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಬಸವರಾಜ ದೇಸಾಯಿ, ಕುಮಾರ ದೇಸಾಯಿ, ಶ್ರೀನಿವಾದ ನಿಡೋಣಿ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 