ರಬಕವಿ-ಬನಹಟ್ಟಿಯಲ್ಲಿ ಪತ್ರಿಕಾ ವಿತರಕರ ದಿನಾಚರಣೆ
Newspaper Distributors' Day Celebration in Rabakavi-Banahatti
ಲೋಕದರ್ಶನ ವರದಿ
ರಬಕವಿ-ಬನಹಟ್ಟಿ 04: ಬನಹಟ್ಟಿ ನಗರದ ಆರಧ್ಯ ದೈವ ಕಾಡಸಿದ್ದೇಶ್ವರ ಸೌಹಾರ್ದ ಸಹಕಾರ ಸಂಘದಲ್ಲಿ ಹಮ್ಮಿಕೊಂಡ ಪತ್ರಿಕಾ ವಿತರಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಶಿವಾನಂದ ಮಹಾಬಲಶೆಟ್ಟಿ ಮಾತನಾಡಿ, ಪತ್ರಿಕಾ ವಿತರಕರು ಪತ್ರಿಕೋದ್ಯಮದ ಅವಿಭಾಜ್ಯ ಅಂಗವಾಗಿದ್ದಾರೆ. ಪತ್ರಕರ್ತರು ಸುದ್ದಿಯನ್ನು ಸಂಗ್ರಹಿಸಿ ಪ್ರಕಟಿಸುವ ಕಾರ್ಯ ನಿರ್ವಹಿಸಿದರೆ, ಆ ಸುದ್ದಿಯನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಮಹತ್ವದ ಜವಾಬ್ದಾರಿಯನ್ನು ವಿತರಕರು ನಿರ್ವಹಿಸುತ್ತಾರೆ. ಪ್ರತಿಕೂಲ ಹವಾಮಾನ, ಮಳೆ, ಚಳಿ ಸೇರಿದಂತೆ ಯಾವುದೇ ಪರಿಸ್ಥಿತಿಯಲ್ಲೂ ಮುಂಜಾನೆ ವೇಳೆಯೇ ಪತ್ರಿಕೆಗಳನ್ನು ಓದುಗರಿಗೆ ತಲುಪಿಸುವ ವಿತರಕರ ಶ್ರಮ ಶ್ಲಾಘನೀಯವಾಗಿದೆ ಎಂದು ಹೇಳಿದರು.
ಪತ್ರಿಕೆ ಓದುವ ಸಂಸ್ಕೃತಿಯನ್ನು ಬೆಳೆಸುವಲ್ಲಿ ಹಾಗೂ ಸಮಾಜದಲ್ಲಿ ಜಾಗೃತಿ ಮೂಡಿಸುವಲ್ಲಿ ವಿತರಕರ ಕೊಡುಗೆ ಮಹತ್ವದ್ದಾಗಿದೆ. ಇಂದಿನ ಡಿಜಿಟಲ್ ಯುಗದಲ್ಲಿ ಸುದ್ದಿಗಳು ಕ್ಷಣಾರ್ಧದಲ್ಲಿ ಮೊಬೈಲ್ ಮೂಲಕ ಲಭ್ಯವಾಗುತ್ತಿದ್ದರೂ, ಮುದ್ರಿತ ಪತ್ರಿಕೆಗೆ ತನ್ನದೇ ಆದ ವಿಶ್ವಾಸಾರ್ಹತೆ ಮತ್ತು ಮಹತ್ವವಿದೆ. ಪತ್ರಿಕೆಗಳನ್ನು ನಿರಂತರವಾಗಿ ಜನರಿಗೆ ತಲುಪಿಸುವ ವಿತರಕರ ಸೇವೆಯನ್ನು ಸಮಾಜ ಗುರುತಿಸಿ ಗೌರವಿಸಬೇಕಾಗಿದೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಕಾನಿಪ ಸಂಘದ ಅಧ್ಯಕ್ಷ ಪ್ರಕಾಶ ಕುಂಬಾರ, ತಾಲೂಕು ವಿತರಕರ ಸಂಘದ ಅಧ್ಯಕ್ಷ ವಿಶ್ವನಾಥ ಆಳಗಿ, ಕಾನಿಪ ಸಂಘದ ಉಪಾಧ್ಯಕ್ಷ ಮಾಧವಾನಂದ ಕೋಪರ್ಡೆ, ಕಾನಿಪ ಸಂಘದ ಕಾರ್ಯದರ್ಶಿ ಚಂದ್ರಶೇಖರ ತುಂಗಳ, ವಿಶ್ವಜ ಕಾಡದೇವರ, ಕಿರಣ ಆಳಗಿ, ಬಸವರಾಜ ಪಟ್ಟಣ, ಶಂಭುಲಿಂಗ ಗುಣಕಿ ಸೇರಿದಂತೆ ಅನೇಕ ಪತ್ರಕರ್ತರು, ಪತ್ರಿಕಾ ವಿತರಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 