ರಾಜ್ಯ ಸರ್ಕಾರಕ್ಕೆ 56205.54 ಲಕ್ಷ ರೂ.ಗಳ ಕ್ರಿಯಾಯೋಜನೆ ಮಂಜೂರಾತಿಗೆ ಸಲ್ಲಿಸಲು ನಿರ್ಧರ

ವಿಜಯಪುರ ಮೇ.11: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿನ ಎಲ್ಲ ಮನೆಗಳು ಮತ್ತು ಸಾರ್ವಜನಿಕ ಕಟ್ಟಡಗಳಿಗೆ ನೀರಿನ ನಳಗಳ ಸಂಪರ್ಕ ಕಲ್ಪಿಸುವ ಜಲ ಜೀವನ ಯೋಜನೆಯಡಿ ಒಟ್ಟು 56205. 54 ಲಕ್ಷ ರೂ.ಗಳ ಕ್ರಿಯಾಯೋಜನೆ ಮಂಜೂರಾತಿಗಾಗಿ ರಾಜ್ಯ ಸಕರ್ಾರಕ್ಕೆ ಸಲ್ಲಿಸಲು ನಿರ್ಧರಿಸಲಾಗಿದೆ. 

          ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಗೋವಿಂದ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಕುರಿತು ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. 

        ಕೇಂದ್ರ ಹಾಗೂ ರಾಜ್ಯ ಪುರಸ್ಕೃತ ಜಲ ಜೀವನ ಯೋಜನೆಯಡಿ 2020ರಿಂದ 2024ರವರೆಗೆ ಜಿಲ್ಲೆಯ ಎಲ್ಲ ಮನೆಗಳು, ಶಾಲೆ, ಅಂಗನವಾಡಿ ಕೇಂದ್ರ, ವಸತಿ ನಿಲಯ ಹಾಗೂ ಆರೋಗ್ಯ ಕೇಂದ್ರಗಳಿಗೆ ಕಾಯರ್ಾತ್ಮಕ ನಳನೀರು ಕಲ್ಪಿಸುವ ಉದ್ದೇಶ ಹೊಂದಲಾಗಿದ್ದು, ಈಗಾಗಲೇ ತಾಲೂಕಾವಾರು ಮತ್ತು ಜಿಲ್ಲೆಯ ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ. 

        ಈ ಕ್ರಿಯಾ ಯೋಜನೆಯಡಿ ಜಿಲ್ಲೆಯ ಐದು ತಾಲೂಕುಗಳ 353658 ಮನೆಗಳಿಗೆ, 3.28 ಲಕ್ಷ ನಳಗಳ ಸಂಪರ್ಕಕ್ಕಾಗಿ 56205.54 ಲಕ್ಷ ರೂ.ಗಳ ಕ್ರಿಯಾ ಯೋಜನೆ ಸಿದ್ಧಪಡಿಸಿದ್ದು, ರಾಜ್ಯ ಸಕರ್ಾರದ ಮಂಜೂರಾತಿಗೆ  ಸಲ್ಲಿಸಲು ನಿರ್ಧರಿಸಲಾಯಿತು.

      ಸಭೆಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿಯವರು ಮುಂಬರುವ ದಿನಗಳಲ್ಲಿ ಜಲಧಾರೆ ಹಾಗೂ ಜಲ ಜೀವನ ಮಿಷನ್ ಯೋಜನೆಯಡಿ ಪ್ರತಿ ಮನೆಗೆ ನೀರಿನ ಸೌಲಭ್ಯ ದೊರೆಯಲಿದೆ. ಕೇಂದ್ರ ಸಕರ್ಾರದ ಮತ್ತು ರಾಜ್ಯ ಸಕರ್ಾರಗಳಿಂದ ತಲಾ ಶೇ, 45 ರಷ್ಟು ಅನುದಾನ ಮತ್ತು ಗ್ರಾಮ ಪಂಚಾಯತಗಳಿಂದ ಶೇ. 10 ರಷ್ಟು  ಅನುದಾನದಡಿ ಈ ಯೋಜನೆ  ಜಾರಿಯಾಗಲಿದ್ದು, ಜಿಲ್ಲೆಯ 213 ಗ್ರಾಮ ಪಂಚಾಯತ ವ್ಯಾಪ್ತಿಯ 629 ಗ್ರಾಮಗಳ ಎಲ್ಲ ಮನೆ, ಶಾಲೆ, ಅಂಗನವಾಡಿ ಕೇಂದ್ರ, ವಸತಿ ನಿಲಯ ಹಾಗೂ ಆರೋಗ್ಯ ಕೇಂದ್ರಗಳಿಗೆ ಕಾಯರ್ಾತ್ಮಕ ನಳನೀರು ಸಂಪರ್ಕ ಕಲ್ಪಿಸುವ ಯೋಜನೆ ಹೊಂದಲಾಗಿದೆ ಎಂದು ಅವರು ಹೇಳಿದರು.

         ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿವರ್ಾಹಕ ಅಭಿಯಂತರರಾದ ಶ್ರೀ ಎಸ್.ಕುಮಾರ್ ಅವರು ಮಾತನಾಡಿ ಐದು ವರ್ಷಗಳ ಅವಧಿಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಮನೆಗಳಿಗೆ, ಮತ್ತು ಸಾರ್ವಜನಿಕರ ಕಟ್ಟಡಗಳಿಗೆ ಶುದ್ಧ ನೀರು ಕಲ್ಪಿಸುವ ಯೋಜನೆ ಇದಾಗಿದೆ. 

   ವಿವಿಧ ಗ್ರಾಮ ಪಂಚಾಯತ ವ್ಯಾಪ್ತಿಗಳ 1035  ಜನವಸತಿಗಳಿಗೆ ನೀರು ಕಲ್ಪಿಸುವ ಉದ್ದೇಶ ಹೊಂದಲಾಗಿದೆ. ಈ ಯೋಜನೆಯಿಂದ ಯಾವುದೇ ಮನೆ ಬಿಟ್ಟು ಹೋಗದಂತೆ ಮುನ್ನೆಚ್ಚರಿಕೆಯೊಂದಿಗೆ ಕ್ರಿಯಾಯೋಜನೆ ರೂಪಿಸಲಾಗಿದ್ದು, ಮಂಜೂರಾತಿಗಾಗಿ ಸಕರ್ಾರಕ್ಕೆ ಸಲ್ಲಿಸಲಾಗುತ್ತಿದೆ ಎಂದು ಹೇಳಿದರು. ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಭಿಯಂತರರು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಈವರೆಗೆ 50 ಕೊರೊನಾ ಸೋಂಕಿತರು ದೃಢ