ನಿಜ ಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ
Nija Sharan Ambigara celebrates Chowdayya Jayanti
ಧಾರವಾಡ ಜ.22: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಿನ್ನೆ (ಜ.21) ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ನಿಜಶರಣ ಅಂಬಿಗರ ಚೌಡಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಬೆಳಗಿಸುವುದರೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಸಿ, ಮಾತನಾಡಿದರು. ಕಲಘಟಗಿಯ ಚಿಂತಕ ಹನುಮಂತಪ್ಪ ಸರಾವರಿ ಅವರು ಅಂಬಿಗರ ಚೌಡಯ್ಯನವರ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿದರು. ಸುವರ್ಣಾ ಚೀಟೀನ್ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರಾದ ಮಂಜುನಾಥ ಭೀಮಕ್ಕನವರ, ಮನೋಜಕುಮಾರ ಕರ್ಜಗಿ, ಗುರು ಮತ್ತೂರ, ಅಶೋಕಕುಮಾರ ಬೆಸ್ತಾ ಹಾಗೂ ಇನ್ನಿತರರು ಭಾಗವಹಿಸಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 