ಇಂಡಿ ನಗರದಲ್ಲಿ ಅಬ್ಬರಿಸಿದ ನಿಖಿಲ್ ಕುಮಾರಸ್ವಾಮಿ
Nikhil Kumaraswamy creates a stir in Indi Nagar
ಇಂಡಿ 16: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ನೆಪದಲ್ಲಿ ರೈತರ ಬಡವರ ಹಿತ ಕಾಪಾಡುವಲ್ಲಿ ತುಂಬಾ ವಿಫಲವಾಗಿವೆ. ನಿಂಬೆ ಬೆಳೆಗಾರರು ಸೂಕ್ತದರ ಇಲ್ಲದ ಕಾರಣ ತುಂಬಾ ಕಷ್ಟದಲ್ಲಿ ಇದ್ದಾರೆ ಎಂದು ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದ ರಾಜ್ಯ ಜಾತ್ಯತೀತ ಜನತಾದಳ ರಾಜ್ಯ ಯುವ ಘಟಕ ಅಧ್ಯಕ್ಷ ನೀಖಿಲ ಕುಮಾರಸ್ವಾಮಿ ಅವರು ರೈತರಿಂದ ಬೆಂಬಲ ಬೆಲೆಯಲ್ಲಿ ನಿಂಬೆ ಖರೀದಿಸಿ ರೈತರ ಹಿತ ಕಾಪಾಡಬೇಕು ಎಂದು ಆಗ್ರಹಿಸಿದರು.
ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಸದಸ್ಯತ್ವ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಮುಖ್ಯಮಂತ್ರಿಗಳ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಗುದ್ದಾಟ ಪ್ರಾರಂಭವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಹೆಸರು ಹೇಳದೇ ರಾಜ್ಯ ಸರ್ಕಾರವನ್ನು ಕುಟುಕಿದರು. ಹಿಂದೆ ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರದಲ್ಲಿ ಇದ್ದಾಗ ಈ ಭಾಗದಲ್ಲಿ ನೀರಾವರಿ ಯೋಜನೆ ಮಾಡುವುದರ ಮೂಲಕ ಜನ ಮನಗೆದ್ದಿರುವ ರೈತ ಪರ ಪಕ್ಷ ನಮ್ಮದಾಗಿದೆ. ಇಂಡಿ ಮತಕ್ಷೇತ್ರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಬಿ ಡಿ ಪಾಟೀಲ ಬಡವರು ಆಗಿರಬಹುದು. ಆದರೆ ಗುಣದಿಂದ ಶ್ರೀಮಂತರೂ ಇದ್ದಾರೆ, ಅವರು ಎರಡು ಬಾರಿ ಸ್ವಲ್ಪ ಅಂತರದಲ್ಲಿ ಸೋಲು ಕಂಡಿದ್ದಾರೆ. ತಮ್ಮ ಎಲ್ಲರ ಆಶೀರ್ವಾದದಿಂದ ಮುಂಬರುವ ದಿನಗಳಲ್ಲಿ ಶಾಸಕರಾಗುತ್ತಾರೆ ಎಂಬ ವಿಶ್ವಾಸ ಅವರಿಗೆ ಎಲ್ಲಾ ರೀತಿಯಿಂದ ಸಹಕಾರ ಮಾಡುವುದಾಗಿ ಭರವಸೆ ನೀಡಿದರು.
ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ನಾಗಠಾಣ ಮಾಜಿ ಶಾಸಕ ದೇವಾನಂದ್ ಚವ್ಹಾಣ, ಬಸವನಬಾಗೇವಾಡಿ ಜೆಡಿಎಸ್ ಪರಾಜಿತ ಅಭ್ಯರ್ಥಿ ಅಪ್ಪುಗೌಡ ಪಾಟೀಲ, ಸೇರಿದಂತೆ ಅನೇಕರು ಮಾತನಾಡಿದರು.
ಜೆಡಿಎಸ್ ಮುಖಂಡರಾದ ಶ್ರೀಶೈಲಗೌಡ ಪಾಟೀಲ, ವಿರಾಜ ಪಾಟೀಲ, ಮರೇಪ್ಪ ಗಿರಣಿವಡ್ಡರ, ಪಂಚಪ್ಪ ಕಲಬುರ್ಗಿ, ಶಿವು ಬಗಲಿ, ನಾಗೇಶ್ ತಳಕೇರಿ, ಪೀರ್ಪ ಹೋಟಗಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 