ನಿಂಗಣ್ಣ ಬಿರಾದಾರ ಅವರಿಗೆ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಸ್ಥಾನ: ಭವ್ಯ ಸನ್ಮಾನ
Ninganna Biradar appointed President of the State Small-Scale Industries Association: Grand felicita
ಇಂಡಿ 26: ಕೈಗಾರಿಕೆಗಳ ಅಭಿವೃದ್ಧಿಗೆ ಭೂಮಿ, ಹಣ, ವಿದ್ಯುತ್ ಹಾಗೂ ಅಧಿಕಾರಿಗಳ ಸಹಕಾರ ಅಗತ್ಯ. ಕೈಗಾರಿಕೆ ಸ್ಥಾಪಿಸಿ ಯಶಸ್ವಿಯಾಗಿ ನಡೆಸುವುದು ಅತ್ಯಂತ ಕಠಿಣ ಕಾರ್ಯವಾಗಿದ್ದು, ಬರದ ನಾಡಿನಲ್ಲಿಯೂ ಸಣ್ಣ ಕೈಗಾರಿಕೆ ಆರಂಭಿಸಿ ಇಂದು ರಾಜ್ಯ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಸ್ಥಾನಕ್ಕೇರಿರುವ ನಿಂಗಣ್ಣ ಬಿರಾದಾರ ಅವರ ಸಾಧನೆ ಶ್ಲಾಘನೀಯವಾಗಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಇಂಡಿ ನಗರದ ಶಂಕರ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ ನಿಂಗಣ್ಣ ಬಿರಾದಾರ ಅವರ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯ ಮಟ್ಟದ ಪ್ರತಿಷ್ಠಿತ ಹುದ್ದೆಗೆ ಆಯ್ಕೆಯಾಗಿರುವ ನಿಂಗಣ್ಣ ಬಿರಾದಾರ ಅವರು ಬರದ ನಾಡಿನಿಂದ ಬೆಂಗಳೂರಿನವರೆಗೆ ಉದ್ಯಮ ಕ್ಷೇತ್ರದಲ್ಲಿ ದಶಕಗಳ ಕಾಲ ನಿರಂತರ ಪರಿಶ್ರಮ ಪಟ್ಟಿದ್ದಾರೆ. ಮೂಲತಃ ಇಂಡಿ ಭಾಗದವರಾದ ಅವರು ಹುಬ್ಬಳ್ಳಿಯಲ್ಲಿ ತಮ್ಮ ಉದ್ಯಮ ಸಾಮ್ರಾಜ್ಯವನ್ನು ನಿರ್ಮಿಸಿದ್ದಾರೆ. ವಿದ್ಯುತ್ ಹಾರ್ಡ್ವೇರ್ ಲೈನ್ ಸಾಮಗ್ರಿಗಳನ್ನು ಉತ್ಪಾದಿಸುವ ಬನಶಂಕರಿ ಎಂಜಿನಿಯರ್ಸ್ ಸಂಸ್ಥೆಯ ಪಾಲುದಾರರಾಗಿರುವ ಅವರು, ಈ ಹಿಂದೆ ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷರಾಗಿಯೂ ಯಶಸ್ವಿಯಾಗಿ ಸೇವೆ ಸಲ್ಲಿಸಿದ್ದಾರೆ.
ಈ ಬಾರಿ ಇಡೀ ಕರ್ನಾಟಕದ ಸಣ್ಣ ಕೈಗಾರಿಕೆಗಳ ಒಕ್ಕೂಟದ ಸಾರಥ್ಯ ವಹಿಸಿರುವುದು ಅವರ ನಾಯಕತ್ವ ಗುಣಕ್ಕೆ ಸಾಕ್ಷಿಯಾಗಿದೆ ಎಂದು ಯತ್ನಾಳ ಹೇಳಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷ ನಿಂಗಣ್ಣ ಬಿರಾದಾರ ಅವರು, ರಾಜ್ಯದಲ್ಲಿ ವಿಶೇಷವಾಗಿ ಉತ್ತರ ಕರ್ನಾಟಕ ಹಾಗೂ ಗ್ರಾಮೀಣ ಭಾಗಗಳಲ್ಲಿ ಕೈಗಾರಿಕಾ ಕ್ಷೇತ್ರ ಇನ್ನಷ್ಟು ಬೆಳೆಯಬೇಕಾಗಿದೆ. ಸಣ್ಣ ಉದ್ಯಮಿಗಳು ಎದುರಿಸುತ್ತಿರುವ ವಿದ್ಯುತ್, ತೆರಿಗೆ ಹಾಗೂ ಮೂಲಸೌಕರ್ಯ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಪರಿಹರಿಸಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಹೇಳಿದರು.
ಹೊಸ ಕೈಗಾರಿಕಾ ನೀತಿಯಲ್ಲಿ ಸಣ್ಣ ಕೈಗಾರಿಕೆಗಳಿಗೆ ಹೆಚ್ಚಿನ ಉತ್ತೇಜನ ದೊರೆಯುವಂತೆ ಕ್ರಮ ಕೈಗೊಳ್ಳಲು ಪ್ರಯತ್ನಿಸುವುದಾಗಿ ಅವರು ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಶೀರ್ವಚನ ನೀಡಿ, ನಿಂಗಣ್ಣ ಬಿರಾದಾರ ಅವರ ಮೂಲಕ ರಾಜ್ಯದ ಸಣ್ಣ ಕೈಗಾರಿಕೆಗಳು ಮತ್ತಷ್ಟು ಎತ್ತರಕ್ಕೇರಲಿ ಹಾಗೂ ಗಡಿ ಭಾಗಗಳಲ್ಲಿಯೂ ಕೈಗಾರಿಕೆಗಳು ಸ್ಥಾಪನೆಯಾಗಿ ಸ್ಥಳೀಯರಿಗೆ ಉದ್ಯೋಗ ದೊರೆಯಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘದ ಮಾಜಿ ಅಧ್ಯಕ್ಷರಾದ ಹನುಮಂತೇಗೌಡ, ನರಸಿಂಹಮೂರ್ತಿ, ಕೆ.ಬಿ. ಅರಸಾಪುರ, ಉಪಾಧ್ಯಕ್ಷ ಎಚ್.ಎನ್. ರಾಮಕೃಷ್ಣ, ಜೆಡಿಎಸ್ ಧುರೀಣ ಬಿ.ಡಿ. ಪಾಟೀಲ, ಬಿಜೆಪಿ ಮುಖಂಡ ಧುರೀಣ ಕಾಸುಗೌಡ ಬಿರಾದಾರ, ಶ್ರೀಶೈಲಗೌಡ ಬಿರಾದಾರ, ಶಿಕ್ಷಕ ವೈ.ಜಿ. ಬಿರಾದಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವೇದಿಕೆಯಲ್ಲಿ ವಿ.ಎಚ್. ಬಿರಾದಾರ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ನಾನಾಗೌಡ ಬಿರಾದಾರ,
ಮಲ್ಲನಗೌಡ ಬಿರಾದಾರ, ಡಿ.ಆರ್. ಶಹಾ, ಶ್ರೀಮಂತ ಇಂಡಿ, ಬಿ.ಎಚ್. ಬಿರಾದಾರ, ಪ್ರಭುಗೌಡ ಬಿರಾದಾರ, ಮುತು ದೇಸಾಯಿ, ಶಾಂತಗೌಡ ಬಿರಾದಾರ, ಜಗದೀಶ ಕ್ಷತ್ರಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪ್ರಕಾಶ ಬಿರಾದಾರ, ರಾಜು ಹದಗಲ್, ಶಾಂತು ತೆನ್ನಳ್ಳಿ, ಅನೀಲಗೌಡ ಬಿರಾದಾರ, ಅಭಿನಂದನ ಕಿರಣಗಿ, ಚಂದ್ರಶೇಖರ ರೂಗಿ, ಮಂಜುನಾಥ ದೇವರ, ಸಂತೋಷ ಕಕ್ಕಳಮೇಲಿ, ಸತೀಶ ರಜುಂಪಾ ಸೇರಿದಂತೆ ಹಲವರು ಭಾಗವಹಿಸಿದ್ದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 