ನಿರ್ಭಯಾ ಪ್ರಕರಣ : ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ
ನವದೆಹಲಿ, ಜನವರಿ 17, ನಿರ್ಭಯಾ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ನಾಲ್ವರು ಅತ್ಯಾಚಾರಿಗಳ ಪೈಕಿ ಮುಕೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ಅವರು ತಿರಸ್ಕರಿದ್ದಾರೆ. ಕೇಂದ್ರ ಗೃಹ ಸಚಿವಾಲಯದ ಶಿಫಾರಸ್ ಮೇರೆಗೆ ಅವರು ಈ ತೀರ್ಮಾನ ತೆಗೆದುಕೊಂಡಿದ್ದಾರೆ . ಗೃಹ ಸಚಿವಾಲಯದ ಶಿಫಾರಸ್ ಪ್ರಕಾರ ಪ್ರಕಾರ ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರು ಕ್ಷಮಾಧಾನ ಮನವಿಯನ್ನು ತಿರಸ್ಕರಿದ್ದು ಹಂತಕರಿಗೆ ಗಲ್ಲು ಶಿಕ್ಷೆ ಜಾರಿ ಮಾಡಲು ಇದ್ದ ಅಡ್ಡಿ ಆತಂಕ ದೂರವಾಗಿದೆ. ಮುಕೇಶ್ ಸಿಂಗ್ ಕೆಲ ದಿನಗಳ ಹಿಂದೆ ತನಗೆ ಕ್ಷಮಾದಾನ ನೀಡುವಂತೆ ಮನವಿ ಮಾಡಿಕೊಂಡಿದ್ದ. ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಗುರುವಾರ ಈ ಮನವಿಯನ್ನು ಗೃಹ ಸಚಿವಾಲಯಕ್ಕೆ ರವಾನಿಸಿ ಮನವಿ ತಿರಸ್ಕರಿಸುವಂತೆ ಶಿಫಾರಸು ಮಾಡಲಾಗಿತ್ತು . 2012ರಲ್ಲಿ ದೆಹಲಿಯಲ್ಲಿ ಆರು ಮಂದಿ ಸೇರಿ ನಿರ್ಭಯಾ(ಹೆಸರು ಬದಲಿಸಲಾಗಿದೆ) ಮೇಲೆ ಅಮಾನುಷ ರೀತಿಯಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಕೆಲ ದಿನಗಳ ಜೀವನ್ಮರಣ ಹೋರಾಟದ ಬಳಿಕ ಆಕೆ ದೂರದ ಸಿಂಗಾಪುರದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಎಲ್ಲಾ 6 ಮಂದಿಯನ್ನು ಬಂಧಿಸಿದ್ದರೂ ಒಬ್ಬ ಬಾಲಾಪರಾಧಿ ಎಂಬ ಕಾರಣಕ್ಕೆ ಆತನಿಗೆ ಬಾಲಾಪರಾಧ ನಿಯಮದ ಪ್ರಕಾರ ಶಿಕ್ಷೆಯಾಗಿ ಹೊರ ಬಂದಿದ್ದಾನೆ. ರಾಮ್ ಸಿಂಗ್ ಎಂಬ ಪ್ರಮುಖ ಆರೋಪಿಯು ತಿಹಾರ್ ಜೈಲಿನಲ್ಲೇ ನೇಣಿಗೆ ಶರಣಾಗಿದ್ದ. ಉಳಿದ ನಾಲ್ವರಿಗೆ ಮರಣದಂಡನೆ ಶಿಕ್ಷೆ ಘೋಷಣೆಯಾಗಿದೆ. ಆದರೆ, ಮೇಲ್ಮನವಿ, ಕ್ಷಮಾದಾನ ಅರ್ಜಿಗಳ ಕಾರಣದಿಂದಾಗಿ ಅವರನ್ನು ಗಲ್ಲಿಗೇರಿಸುವುದು ತಡವಾಗಿದೆ.ದೆಹಲಿ ಹೈಕೋರ್ಟ್ ಈ ನಾಲ್ವರಿಗೆ ಈಗಾಗಲೇ ಡೆತ್ ವಾರೆಂಟ್ ಹೊರಡಿಸಿ ಇದೇ 22ರಂದು ನೇಣಿಗೇರಿಸಲು ಆದೇಶ ಮಾಡಿತ್ತು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 