ನವದೆಹಲಿ, ಫೆ 7,ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಅಪರಾಧಿಗಳನ್ನು ಪ್ರತ್ಯೇಕವಾಗಿ ಗಲ್ಲಿಗೇರಿಸಲು ಅನುಮತಿ ನಿರಾಕರಿಸಿದ ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಫೆ. 11ಕ್ಕೆ ಮುಂದೂಡಿದೆ. ಶುಕ್ರವಾರ ಅರ್ಜಿ ವಿಚಾರಣೆಗೆ ಬಂದಾಗ ನ್ಯಾಯಮೂರ್ತಿ ಆರ್. ಭಾನುಮತಿ, ಅಶೋಕ್ ಭೂಷಣ್ ಮತ್ತು ಎ.ಎಸ್.ಬೋಪಣ್ಣ ಅವರಿದ್ದ ತ್ರಿಸದಸ್ಯ ಪೀಠ ವಿಶೇಷ ಮೇಲ್ಮನವಿಯನ್ನು ಫೆ. 11ರವರೆಗೆ ಮುಂದೂಡಿತು.