ನವದೆಹಲಿ, ಜ 29 : ನಿರ್ಭಯಾ ಪ್ರಕರಣದ ಅಪರಾಧಿ ಅಕ್ಷಯ್ ಕುಮಾರ್ ಠಾಕೂರ್ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ವಿಚಾರಣೆ ನಡೆಸಲಿದೆ.
ನ್ಯಾಯಮೂರ್ತಿಗಳಾದ ಎನ್.ವಿ.ರಮಣ, ಅರುಣ್ ಮಿಶ್ರ, ರೋಹಿಂಗ್ಟನ್ ಫಾಲಿ ನಾರಿಮನ್, ಆರ್. ಬಾನುಮತಿ ಮತ್ತು ಅಶೋಕ್ ಭೂಷಣ್ ಅವರನ್ನೊಳಗೊಂಡ ಐದು ಸದಸ್ಯರ ನ್ಯಾಯಪೀಠ ಅರ್ಜಿಯ ವಿಚಾರಣೆ ನಡೆಸಲಿದೆ.
2012ರ ಡಿಸೆಂಬರ್ 16ರಂದು ದೆಹಲಿಯ ಚಲಿಸುತ್ತಿದ್ದ ಬಸ್ ನಲ್ಲಿ ಯುವತಿಯ ಮೇಲೆ ಅತ್ಯಾಚಾರ ನಡೆಸಿ, ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರಿಗೆ ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿದೆ. ಅದನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸಬೇಕು ಎಂದು ಠಾಕೂರ್ ಮರುಪರಿಶೀಲನಾ ಅರ್ಜಿಯಲ್ಲಿ ಕೋರಿದ್ದಾರೆ.