ನವದೆಹಲಿ, ಡಿ 2-ಪೆಟ್ರೋಲಿಯಂ ಉತ್ಪನ್ನಗಳು ಮತ್ತು ಡೀಸೆಲ್ ಅನ್ನು ಸರಕು ಮತ್ತು ಸೇವಾ ತೆರಿಗೆ ಜಿ ಎಸ್ ಟಿ ವ್ಯಾಪ್ತಿಗೆ ತರುವ ಬಗ್ಗೆ ಜಿ ಎಸ್ ಟಿ ಮಂಡಳಿ ನಿರ್ಧರಿಸಲಿದೆ ಎಂದು ಸೋಮವಾರ ಲೋಕಸಭೆಗೆ ತಿಳಿಸಲಾಯಿತು.
ಹಿಂದಿನ ಹಣಕಾಸು ಸಚಿವರಾದ ಅರುಣ್ ಜೇಟ್ಲಿ ಈ ಬಗ್ಗೆ ಜಿ ಎಸ್ ಟಿ ಮಂಡಳಿ ಸಭೆಯಲ್ಲಿ ಪ್ರಸ್ತಾಪಿಸಿದ್ದರು ಎಂದು ಪ್ರಶ್ನೋತ್ತರ ಅವಧಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿ ನೀಡಿದರು.
ರಾಜ್ಯಗಳ ಪ್ರತಿನಿಧಿಗಳಿರುವ ಜಿ ಎಸ್ ಟಿ ಮಂಡಳಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಬೇಕಿದೆ ಎಂದು ಅವರು ಹೇಳಿದರು.
ಜಿ ಎಸ್ ಟಿ ಅನುಷ್ಠಾನದ ಸಂದರ್ಭದಲ್ಲಿ ಭರವಸೆ ನೀಡಿದಂತೆ ಒಂದು ರಾಷ್ಟ್ರ, ಒಂದು ತೆರಿಗೆಯನ್ನು ಜಾರಿ ಮಾಡಲು ಕಾಲ ಮಿಂಚಿ ಹೋಗುತ್ತಿದೆ ಎಂದು ಡಿ ಎಂ ಕೆ ಸದಸ್ಯ ದಯಾನಿಧಿ ಮಾರನ್ ಕಳವಳ ವ್ಯಕ್ತಪಡಿಸಿದ್ದಾರೆ.
ಪೆಟ್ರೋಲಿಯಂ ಉತ್ಪನ್ನಗಳನ್ನು ಜಿ ಎಸ್ ಟಿ ವ್ಯಾಪ್ತಿಗೆ ಎಂದು ತರಲಾಗುವುದು ಎಂದು ಬಿಜೆಪಿ ಸದಸ್ಯ ಸುಖ್ ಬಿರ್ ಸಿಂಗ್ ಜೌನಾಪುರಿಯಾ ಸಹ ಪ್ರಶ್ನಿಸಿದರು.