ನಿಶಾಂತ ಮೋಮಿನ್ ಶಾಲೆಗೆ ಪ್ರಥಮ
Nishanta Momin gets first place in school
ದೇವರಹಿಪ್ಪರಗಿ 24: ಶೈಕ್ಷಣಿಕ ಕ್ಷೇತ್ರದಲ್ಲಿ ಗ್ರಾಮೀಣ ಪ್ರತಿಭೆಯೊಂದು ತಾಲೂಕು ಮಟ್ಟದಲ್ಲಿ ಮಿಂಚಿದ್ದು, ಪಟ್ಟಣದ ಜ್ಞಾನಜ್ಯೋತಿ ಸಂಸ್ಥೆಯ ಪ್ರಿನ್ಸ್ ಪಬ್ಲಿಕ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ನಿಶಾಂತ ಮೋಮಿನ್ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 601(97ಅ) ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದು ಈ ಅಪೂರ್ವ ಸಾಧನೆ ಮಾಡಿದ್ದಾರೆ.
ಶ್ರದ್ಧೆ, ಪರಿಶ್ರಮ ಮತ್ತು ಶಿಕ್ಷಕರ ಮಾರ್ಗದರ್ಶನದಿಂದಲೇ ಈ ಸಾಧನೆ ಸಾಧ್ಯವಾಗಿದೆ ಎಂದು ತಿಳಿಸಿದ್ದಾಳೆ. 2025-26ನೇ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಜ್ಞಾನಜ್ಯೋತಿ ಸಂಸ್ಥೆಯ ಪ್ರಿನ್ಸ್ ಪಬ್ಲಿಕ್ ಪ್ರೌಢಶಾಲೆಗೆ 100ಅ ಫಲಿತಾಂಶ ಲಭಿಸಿದೆ.
ಒಟ್ಟು 16 ಜನ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ವಿದ್ಯಾರ್ಥಿನಿ ನಿಶಾಂತ ಫಾತಿಮಾ ಮೋಮಿನ್ (601) ಪ್ರಥಮ,ಸಾಜೀದಾ ಇಸ್ಮಾಯಿಲ್ ಕೊಡಚಿ (590) ದ್ವಿತೀಯ, ಹುಸೇನಬಿ ಒತಿಹಾಳ ಹಾಗೂ ಶಮೀಮಾ ಕರ್ನಾಚಿ(578) ಇಬ್ಬರು ತೃತೀಯ ಸ್ಥಾನ ಪಡೆದಿದ್ದಾರೆ.ಅವರಲ್ಲಿ 04 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಹಾಗೂ ಉಳಿದ 12 ಜನ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.ಗ್ರಾಮೀಣ ಪರಿಸರದಲ್ಲಿಯೇ ಅಭ್ಯಾಸ ಮಾಡುತ್ತಿದ್ದರು ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ ತಂದು ಕೊಟ್ಟಿರುವುದು ವಿಶೇಷವಾಗಿದೆ. ವಿದ್ಯಾರ್ಥಿನಿಯ ಈ ಸಾಧನೆ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದು, ಪಟ್ಟಣ ಹಾಗೂ ಶಾಲೆಯ ಗೌರವ ಹೆಚ್ಚಿಸಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಎನ್.ಬಿ.ಪಾಟೀಲ ತಿಳಿಸಿದ್ದಾರೆ.ವಿದ್ಯಾರ್ಥಿನಿಯ ಈ ಸಾಧನೆ ಹಾಗೂ ಇತರೆ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದು, ಮುಂದಿನ ವಿದ್ಯಾಭ್ಯಾಸಕ್ಕೂ ಶುಭಾಶಯ ಕೋರಿದ್ದಾರೆ.
ಇವರೇ ತಾಲೂಕಿಗೆ ಪ್ರಥಮರು.1) ಕನ್ನಡ ಮಾಧ್ಯಮ ದಲ್ಲಿ ತಾಲೂಕಿನ ಪಡಗಾನೂರು ಗ್ರಾಮದ ಎಸ್.ವ್ಹಿ. ಪ್ರೌಢಶಾಲೆಯ ವಿದ್ಯಾರ್ಥಿನಿ ಪಾಯಲ್ ಸಂಜೀವ ಚವ್ಹಾಣ (610),2) ಇಂಗ್ಲೀಷ್ ಮಾಧ್ಯಮದಲ್ಲಿ ಮುರಾರ್ಜಿ ದೇಸಾಯಿ ವಸತಿ ಪ್ರೌಢಶಾಲೆ ಇಂಗಳಗಿ ವಿದ್ಯಾರ್ಥಿನಿ ಶಿವಲೀಲಾ ರಾಮನಗೌಡ ಭರಮಗೋಳ(606),3) ಉರ್ದು ಮಾಧ್ಯಮದಲ್ಲಿ ಪಟ್ಟಣದ ಉರ್ದು ಸರ್ಕಾರಿ ಪ್ರೌಢಶಾಲೆಯ ಸಾದಿಯಾ ಜಾವಿದಮಿಯಾ ಮುಲ್ಲಾ(585) ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 