'ಉಡಾಳ'ನಿಗೆ ಸಾಥ್ ನೀಡಿದ ನಿಶ್ವಿಕಾ ನಾಯ್ಡು, ನವೀನ್ ಶಂಕರ್
Nishvika Naidu, Naveen Shankar join hands for 'Udala'
ದಾವಣಗೆರೆಯ ರವಿ ಶಾಮನೂರು ಹಾಗೂ ಯೋಗರಾಜ್ ಭಟ್ ಅವರು ನಿರ್ಮಿಸಿರುವ, 'ಉಡಾಳ' ಸಿನಿಮಾ ಈಗಾಗಲೇ ಹಾಡಿನಿಂದ ಸೌಂಡ್ ಮಾಡುತ್ತಿದ್ದಾನೆ. ಅಮೋಲ್ ಪಾಟೀಲ್ ನಿರ್ದೇಶನದ ಹಾಗೂ 'ಪದವಿಪೂರ್ವ' ಖ್ಯಾತಿಯ ಪೃಥ್ವಿ ಶಾಮನೂರು ನಾಯಕನಾಗಿ ನಟಿಸಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಹೆಸರಾಂತ ಕಲಾವಿದರಾದ ನವೀನ್ ಶಂಕರ್ ಹಾಗೂ ನಿಶ್ವಿಕಾ ನಾಯ್ಡು ಟ್ರೇಲರ್ ಅನಾವರಣ ಮಾಡಿ ಚಿತ್ರಕ್ಕೆ ಶುಭ ಕೋರಿದರು. ಮಾಜಿ ಸಚಿವರಾದ ಆಂಜನೇಯ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಟ್ರೇಲರ್ ಬಿಡುಗಡೆ ನಂತರ ತಮ್ಮ 'ಉಡಾಳ' ಗೆಳೆಯನ್ನನ್ನು ನೆನಪಿಸಿಕೊಂಡು ಮಾತನಾಡಿದ ನಿರ್ಮಾಪಕ ಯೋಗರಾಜ್ ಭಟ್, 'ನಗಿಸುವುದು ಅಷ್ಟು ಸುಲಭವಲ್ಲ. ನಗು ಬರುವುದು ಅಷ್ಟು ಸುಲಭವಲ್ಲ. ಆದರೆ ನಿರ್ದೇಶಕ ಅಮೋಲ್ ಪಾಟೀಲ್, ನಾಯಕ ಪೃಥ್ವಿ ಶಾಮನೂರು ಸೇರಿದಂತೆ 20 ಜನ ಕಲಾವಿದರ ತಂಡವನ್ನಿಟ್ಟುಕೊಂಡು 'ಉಡಾಳ' ಚಿತ್ರದ ಮೂಲಕ ನಗುವಿನ ರಸದೌತಣವನ್ನೇ ಬಡಿಸಿದ್ದಾನೆ. ವೃತ್ತಿಯಲ್ಲಿ ಅಧ್ಯಾಪಕರಾಗಿದ್ದ ರವಿ ಶಾಮನೂರು ಸಿನಿಮಾಗೆ ಬಂಡಾವಾಳ ಹೂಡಿದ್ದಾರೆ. ಇದೇ ರೀತಿ ಕಲಿತು ನಟನೆ ಮಾಡಿದರೆ, ಪೃಥ್ವಿ ಸ್ವಲ್ಪ ದಿನಗಳಲ್ಲಿ ಸ್ಟಾರ್ ನಟ ಆಗುತ್ತಾನೆ. ನವೆಂಬರ್ 14 ಚಿತ್ರ ತೆರೆಗೆ ಬರಲಿದೆ ಎಲ್ಲರೂ ನೋಡಿ' ಎಂದರು.
'ಇದು ನಾನು, ಯೋಗರಾಜ್ ಭಟ್ ಅವರ ಜೊತೆಗೆ ಸೇರಿ ನಿರ್ಮಾಣ ಮಾಡುತ್ತಿರುವ ಎರಡನೇ ಸಿನಿಮಾ. ನಿರ್ಮಾಪಕನಿಗೆ ಒಂದೊಳ್ಳೆ ತಂಡ ಸಿಗುವುಕ್ಕಿಂತ ಮತ್ತೇನು ಬೇಕು. ನನಗೆ ಅಂತಹ ಒಳ್ಳೆಯ ತಂಡ ಸಿಕ್ಕಿದೆ. ಚಿತ್ರ ಕೂಡ ಅಂದು ಕೊಂಡ ಹಾಗೆ ಬಂದಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ' ಎಂದರು ನಿರ್ಮಾಪಕ ರವಿ ಶಾಮನೂರು. 'ಉತ್ತರ ಕರ್ನಾಟಕದ ಸೊಗಡನ್ನು ಊಟದಲ್ಲಿ ಉಪ್ಪಿನಕಾಯಿ ಇದ್ದ ಹಾಗೆ ಮಾತ್ರ ಕೆಲವು ಚಿತ್ರಗಳಲ್ಲಿ ಬಳಸಿಕೊಳ್ಳಲಾಗಿತ್ತು. ಆದರೆ ನಮ್ಮ ಚಿತ್ರ ಫುಲ್ ಮೀಲ್ಸ್ ತರಹ ಉತ್ತರ ಕರ್ನಾಟಕದೆ ಸಿನಿಮಾ. ಇಡೀ ಕಥೆ ವಿಜಾಪುರದಲ್ಲೇ ನಡೆಯುತ್ತದೆ. ಉತ್ತರ ಕರ್ನಾಟಕದ ಸುಂದರತೆ ಈ ಚಿತ್ರದಲ್ಲಿದೆ. ನಿರ್ಮಾಪಕರು ಹೇಳಿದ ಹಾಗೆ ಒಂದೊಳ್ಳೆ ತಂಡದ ಸಹಕಾರದಿಂದ ಒಂದೊಳ್ಳೆ ಚಿತ್ರ ನವೆಂಬರ್ 14 ರಂದು ನಿಮ್ಮ ಮುಂದೆ ಬರಲಿದೆ' ಎಂದರು ನಿರ್ದೇಶಕ ಅಮೋಲ್ ಪಾಟೀಲ್.
'ಟೀಸರ್ ಹಾಗೂ ಹಾಡುಗಳನ್ನು ಮೆಚ್ಚಿಕೊಂಡಿರುವ ಜನರು ಟ್ರೇಲರ್‌ಗೂ ಪ್ರಶಂಸೆ ನೀಡುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ಹೇರಳವಾಗಿ ರೀಲ್ಸ್ ಮಾಡುತ್ತಿದ್ದಾರೆ. ಹೋದ ಕಡೆ ಎಲ್ಲಾ ನನ್ನನ್ನು 'ಉಡಾಳ'ನೆಂದೇ ಗುರುತ್ತಿಸುತ್ತಿದ್ದಾರೆ. ಇದನ್ನು ಸಾಧ್ಯವಾಗಿಸಿ ಕೊಟ್ಟ ನನ್ನ ತಂಡಕ್ಕೆ ಹಾಗೂ ಆಗಮಿಸಿರುವ ಗಣ್ಯರಿಗೆ ಅನಂತ ಧನ್ಯವಾದ' ಎಂದರು ನಾಯಕ ಪೃಥ್ವಿ ಶಾಮನೂರು. ಚಿತ್ರದ ಸಂಗೀತ ನಿರ್ದೇಶಕ ಚೇತನ್ ಡ್ಯಾವಿ, ಗಾಯಕಿ ಸೃಷ್ಟಿ ಶಾಮನೂರು, ಸಂಕಲನಕಾರ ಮಧು ತುಂಬಕೆರೆ ಹಾಗೂ ಚಿತ್ರದಲ್ಲಿ ನಟಿಸಿರುವ ಬಲ ರಾಜ್ ವಾಡಿ, ಬಿರಾದಾರ್ ಸೇರಿದಂತೆ ಅನೇಕ ಕಲಾವಿದರು ಸಿನಿಮಾ ಕುರಿತು ಮಾತನಾಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 