25 ಲಕ್ಷ ಮಹಿಳೆಯರ ಖಾತೆಗೆ ತಲಾ 10 ಸಾವಿರ ಜಮೆ ಮಾಡಿದ ನೀತೀಶ್ ಸರ್ಕಾರ
Nitish government deposits Rs 10,000 each into the accounts of 25 lakh women
ಪಟ್ನಾ: ‘ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆ’ ಅಡಿಯಲ್ಲಿ ಬಿಹಾರದ ನೀತೀಶ್ ಕುಮಾರ್ ಸರ್ಕಾರವು ರಾಜ್ಯದ 25 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗೆ 10 ಸಾವಿರ ಜಮೆ ಮಾಡಲಾಗಿದೆ.
ಮಹಿಳಾ ಸಬಲೀಕರಣ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ‘ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆ’ಯನ್ನು ಜಾರಿಗೊಳಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು 2025ರ ಸೆಪ್ಟೆಂಬರ್‌ನಲ್ಲಿ ಯೋಜನೆಗೆ ಚಾಲನೆ ನೀಡಿದ್ದರು.
ಇದುವರೆಗೂ ರಾಜ್ಯದ 1.81 ಕೋಟಿ ಮಹಿಳೆಯರು ಈ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದು, ಅವರ ಖಾತೆಗೆ ತಲಾ 10 ಸಾವಿರ ಜಮೆ ಮಾಡಲಾಗಿದೆ. ಇದಕ್ಕಾಗಿ 2500 ಕೋಟಿ ವೆಚ್ಚಮಾಡಲಾಗಿದೆ. ಇದನ್ನು ಸದ್ಭಳಕೆ ಮಾಡಿಕೊಂಡ ಮಹಿಳಾ ಉದ್ಯಮಿಗಳಿಗೆ, ಅವರ ಉದ್ಯಮವನ್ನು ವಿಸ್ತರಿಸಲು 2 ಲಕ್ಷ ನೀಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆ’ಅಡಿಯಲ್ಲಿ ಉದ್ಯಮಗಳನ್ನು ಸ್ಥಾಪಿಸಿರುವ ಮಹಿಳೆಯರಿಗೆ 2 ಲಕ್ಷದವರೆಗೆ ಹಣಕಾಸು ನೆರವು ಒದಗಿಸುವುದಾಗಿ ಇತ್ತೀಚೆಗೆ ಮುಖ್ಯಮಂತ್ರಿ ನೀತೀಶ್ ಕುಮಾರ್ ತಿಳಿಸಿದ್ದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 