ದುಬೈನಿಂದ ಆಗಮಿಸಿದ ವ್ಯಕ್ತಿಯಲ್ಲಿ ಕೊರೋನಾ ವೈರಸ್ ಇಲ್ಲ: ಡಿಸಿ ಸ್ಪಷ್ಟನೆ

ಬಾಗಲಕೋಟೆ11: ದುಬೈದಿಂದ ಬಾಗಲಕೋಟೆಗೆ ಆಗಮಿಸಿದ ಬಾಗಲಕೋಟೆ ಜಿಲ್ಲೆಯ ಮೂಲದ ವ್ಯಕ್ತಿಗೆ ಕೊರೊನಾ ವೈರಸ್ ಅಂಶ ತಗಲಿರುವುದಿಲ್ಲವೆಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಸ್ಪಷ್ಟಪಡಿಸಿದ್ದಾರೆ. 

ಇತ್ತೀಚೆಗೆ ಬಾಗಲಕೋಟೆ ಜಿಲ್ಲೆಗೆ ದುಬೈನಿಂದ ಆಗಮಿಸಿದ ವ್ಯಕ್ತಿಯ ಗಂಟಲಿನ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಬೆಂಗಳೂರಿನ ರಾಷ್ಟ್ರೀಯ ವೈರಾಣು ಸಂಸ್ಥೆ (ಎನ್.ಐ.ವಿ)ಯ ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಪರೀಕ್ಷೆಯ ಮಾಹಿತಿ ಬಂದಿದ್ದು, ವ್ಯಕ್ತಿಯಲ್ಲಿ ಶಂಕಿತ ಕರೊನಾ ವೈರಸ್ ಅಂಶ ಪತ್ತೆಯಾಗಿರುವುದಿಲ್ಲ ಎಂದು ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಜನತೆ ಹೆದರುವ ಅಗತ್ಯವಿಲ್ಲವೆಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಕೊರೊನಾ ವೈರಸ್ ಹರಡದಂತೆ ಜಿಲ್ಲೆಯ ಜನತೆ ಮುಂಜಾಗ್ರತಾ ಕ್ರಮವಾಗಿ ವಯಕ್ತಿಕ ಸ್ವಚ್ಛತೆ ಹಾಗೂ ಕೈಗಳನ್ನು ಸಾಬೂನು ಮತ್ತು ನೀರಿನಿಂದ ಚೆನ್ನಾಗಿ ತೊಳೆದುಕೊಳ್ಳಬೇಕು. ಕೆಮ್ಮುವಾಗ ಮತ್ತು ಸೀನುವಾಗ ಮೂಗು ಮತ್ತು ಬಾಯಿಯನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳಬೇಕು. ಯಾರೂ ಕೊರೊನಾ ವೈರಸ್ ಬಗ್ಗ ಆತಂಕಕ್ಕೆ ಒಳಗಾಗಬಾರದೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.