ಜಿ.ಪಂ, ತಾ.ಪಂ ಚುನಾವಣೆಗಳಲ್ಲಿ ಬಿಜೆಪಿ ಜತೆ ಮೈತ್ರಿ ಇಲ್ಲ: ದೇವೇಗೌಡ
No alliance with BJP in G.P., T.P. elections: Deve Gowda
ಬೆಂಗಳೂರು: ‘ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬಿಜೆಪಿ ಜತೆಗೆ ಹೊಂದಾಣಿಕೆ ಕಷ್ಟವಾಗಲಿದೆ. ಅಲ್ಲೆಲ್ಲಾ ಜೆಡಿಎಸ್ ಸ್ವಂತ ಬಲದಲ್ಲಿ ಸ್ಪರ್ಧಿಸಲಿದೆ’ ಎಂದು ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.
ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಲೋಕಸಭೆ, ರಾಜ್ಯಸಭೆ, ವಿಧಾನಸಭೆ ಮತ್ತು ವಿಧಾನಪರಿಷತ್ತುಗಳಿಗೆ ನಡೆಯುವ ಚುನಾವಣೆಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಹೊಂದಾಣಿಕೆಯಲ್ಲಿ ಸ್ಪರ್ಧಿಸಲಿವೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ’ ಎಂದು ಸ್ಪಷ್ಟಪಡಿಸಿದರು.
‘ಆದರೆ, ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಪರಿಸ್ಥಿತಿ ಭಿನ್ನವಾಗಿದೆ. ಅಲ್ಲೆಲ್ಲಾ ಪಕ್ಷದ ಸಂಘಟನೆ ಬಲವಾಗಿದ್ದು, ಸ್ವತಂತ್ರವಾಗಿಯೇ ಸ್ಪರ್ಧಿಸಬೇಕಾಗುತ್ತದೆ. ಹೀಗಾಗಿ ಆ ಹಂತದ ಚುನಾವಣೆಗಳಲ್ಲಿ ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಳ್ಳುವುದು ಕಷ್ಟ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
‘ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅಥವಾ ಗೃಹ ಸಚಿವ ಅಮಿತ್ ಶಾ ಅವರ ಜತೆ ಮಾತನಾಡಲು ಸಾಧ್ಯವೇ? ಈ ವಿಚಾರದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ತಮ್ಮ ನಿಲುವನ್ನು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ನಾವೂ ನಮ್ಮ ಸ್ವಂತ ಬಲದಲ್ಲಿಯೇ ಚುನಾವಣೆ ಎದುರಿಸುತ್ತೇವೆ. ಕೇರಳದಲ್ಲಿ ಎಡಪಕ್ಷಗಳ ಜತೆಗೆ ಮೈತ್ರಿ ಮಾಡಿಕೊಳ್ಳುತ್ತೇವೆ’ ಎಂದು ವಿವರಿಸಿದರು. ‘ಅಹಿಂದ ನಾಯಕ ಎಂದು ಓಡಾಡುತ್ತಿರುವವರು ಯಾವಾಗ ಅಹಿಂದ ನಾಯಕರಾಗಿದ್ದರು? ಅಹಿಂದದ ವ್ಯಾಖ್ಯಾನ ಏನು’ ಎಂದು ದೇವೇಗೌಡ ಪ್ರಶ್ನಿಸಿದರು.
ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಮುಸ್ಲಿಮರಿಗೆ ಮೀಸಲಾತಿ ನೀಡಿದವರು ಯಾರು? ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿದವರು ಯಾರು? ನಿಜಕ್ಕೂ ಅಹಿಂದ ನಾಯಕರು ಆಗಿದ್ದಿದ್ದರೆ ಸಿದ್ದರಾಮಯ್ಯ ಅವರು ಚುನಾವಣೆಗೆ ಸ್ಪರ್ಧಿಸಲು ಕೋಲಾರ, ಬಾದಾಮಿ ಎಂದು ವರ್ಷಗಳ ಕಾಲ ಕ್ಷೇತ್ರ ಹುಡುಕಬೇಕಿತ್ತೇ’ ಎಂದರು.
‘ದೇಶದ ಕೆಲವು ರಾಜ್ಯಗಳಲ್ಲಿ ಕ್ರಿಸ್ಮಸ್ ಆಚರಣೆ ವೇಳೆ ಚರ್ಚ್ಗಳ ಮೇಲೆ ದಾಳಿ ನಡೆದಿದೆ. ಇದು ಹೇಯ ಕೃತ್ಯ. ಇದನ್ನು ನಾವೆಲ್ಲರೂ ಖಂಡಿಸಬೇಕು’ ಎಂದು ದೇವೇಗೌಡ ಹೇಳಿದರು. ‘ಈ ದೇಶದಲ್ಲಿ ಎಲ್ಲ ಧರ್ಮದವರೂ ಇದ್ದಾರೆ. ಚರ್ಚ್ ಮೇಲೆ ದಾಳಿ ನಡೆಯಬಾರದಿತ್ತು. ಆದರೆ ಆಗಿದೆ. ದಾಳಿ ನಡೆಸಿದವರ ವಿರುದ್ಧ ಕ್ರಮತೆಗೆದುಕೊಳ್ಳಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ಚರ್ಚ್ಗೆ ಹೋಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ದಾಳಿಕೋರರ ಮೇಲೆ ಅವರು ಖಂಡಿತಾ ಕ್ರಮ ತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ’ ಎಂದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 