ಸಂದಿಗ್ಧ ಪರಿಸ್ಥಿತಿಯಲ್ಲಿ ಮುನಿಸಿನ ರಾಜಕೀಯ ಮಾಡಲು ಸಣ್ಣ ಮಕ್ಕಳಲ್ಲ: ಡಾ. ಕೆ. ಸುಧಾಕರ್

ಬೆಂಗಳೂರು, ಏ. 4, ಕೊರೊನಾದಿಂದ ಇಡೀ ದೇಶವೇ ಸಂದಿಗ್ಧತೆಯಲ್ಲಿದ್ದು, ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮುನಿಸಿನ ರಾಜಕೀಯ ಮಾಡಲು ನಾವು ಸಣ್ಣ ಮಕ್ಕಳಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿರುಗೇಟು ನೀಡಿದ್ದಾರೆ.ನಮ್ಮದೇ ಆದ ಜವಾಬ್ದಾರಿಗಳಿವೆ. ಈ ಸುಳ್ಳು ಸುದ್ದಿಗಳ ಹಿಂದೆ ನೀಚ ರಾಜಕೀಯ ಷಡ್ಯಂತ್ರವಿದೆ.ನನ್ನ  ಮತ್ತು ಆರೋಗ್ಯ ಸಚಿವರಾದ ಶ್ರೀರಾಮುಲು ಅವರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ.  ಕೊರೋನಾ ವಿರುದ್ಧ ಟೊಂಕ ಕಟ್ಟಿ ಹೋರಾಡುತ್ತಿದ್ದೇವೆ. ಪರಸ್ಪರ ಮಾತುಕತೆಯ ಮೂಲಕ  ಸಮಸ್ಯೆಗೆ ಪರಿಹಾರ ಹುಡುಕುತ್ತಿದ್ದೇವೆ. ನಾನು ಮತ್ತು ಶ್ರೀರಾಮುಲು   ಅಣ್ಣ-ತಮ್ಮಂದಿರಂತೆ ಈ ರಾಜ್ಯದ ಜನರ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇವೆ  ಎಂದು  ಟ್ವಿಟರ್ನಲ್ಲಿ ಸುಧಾಕರ್ ಸ್ಪಷ್ಟಪಡಿಸಿದ್ದಾರೆ.ಆರೋಗ್ಯ ಸಚಿವ ಶ್ರೀರಾಮುಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ಮಧ್ಯೆ ಸಮನ್ವಯತೆ ಇಲ್ಲ, ಭಿನ್ನಾಭಿಪ್ರಾಯವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವರು ರಾಜಕೀಯ ನಾಯಕರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಸಚಿವರು ಈ ಸ್ಪಷ್ಟನೆ ನೀಡಿದ್ದಾರೆ.