ಬೆಂಗಳೂರು, ಜೂ.26: ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-19 ಚಿಕಿತ್ಸೆಗೆ ಸರಕಾರ ಅಂತಿಮಗೊಳಿಸಿದ ದರವನ್ನು ಖಾಸಗಿ ಆಸ್ಪತ್ರೆಗಳು ಒಪ್ಪಿಕೊಂಡಿಲ್ಲ ಇಂತಹ ಸಮಯದಲ್ಲಿ ಸಂಘರ್ಷ ಸಲ್ಲದು ಮಾಜಿ ಸಚಿವ ಎಚ್.ಕೆ.ಪಾಟೀಲ್ ಎಂದು ಎಚ್ಚರಿಸಿದ್ದಾರೆ.ಈ ಕುರಿತು ತಕ್ಷಣವೇ ಭಾರತೀಯ ವೈದ್ಯ ಸಂಘ ಜೊತೆ ಸಭೆ ಏರ್ಪಡಿಸಿ ಖಾಸಗಿ ಆಸ್ಪತ್ರೆಯ ಪ್ರತಿನಿಧಿಗಳನ್ನು ಕರೆದು ಮಾತುಕತೆಯ ಮೂಲಕ ಸಮಸ್ಯೆ ತಕ್ಷಣವೇ ಬಗೆಹರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ಇದು ಸಂಘರ್ಷದ ಸಮಯವಲ್ಲ ಹಠ ಸಾಧೆನೆಗೆ ಕುಳಿತರೆ ಗಂಡಾಂತರಕಾರಿ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದೂ ಅವರು ಪಾಟೀಲ್ ಎಂದು ಎಚ್ಚರಿಸಿದ್ದಾರೆ.ಈ ಬಗ್ಗೆ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಪತ್ರ ಬರೆದಿದ್ದಾರೆ.ವಿಶ್ವದಾದ್ಯಂತ ಮಹಾಮಾರಿಜನನ ಕೊರೋನ ವೈರಸ್ (ಕೋವಿಡ್-19)ರಿಂದ ಅತ್ಯಂತ ಗಂಭೀರ, ಕಳವಳಕಾರಿ ಹಾಗೂ ಆತಂಕದ ಪರಿಸ್ಥಿತಿ ಎದುರಾಗಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮಹತ್ವದ ಹೊಣೆಗಾರಿಕೆಯನ್ನು ಮತ್ತು ಜವಾಬ್ದಾರಿಯನ್ನು ನಿರ್ವಹಿಸಬೇಕಾಗಿದೆ. ಈ ಜವಾಬ್ದಾರಿಗಳನ್ನು ನಿರ್ವಹಿಸುವ ಸಂದರ್ಭದಲ್ಲಿ ಸರ್ಕಾರ ಪಾರದರ್ಶಕ, ಭ್ರಷ್ಠಾಚಾರ ಮುಕ್ತ ಮತ್ತು ಸಮಯೋಚಿತ ಜನಪರ ನಿರ್ಧಾರಗಳನ್ನು ಕಾಲಕಾಲಕ್ಕೆ ತೆಗೆದುಕೊಳ್ಳಬೇಕಾಗಿರುವುದು ಇಂದಿನ ಅವಶ್ಯಕತೆ. ಗಂಭೀರ ಪರಿಸ್ಥಿತಿಯನ್ನು ಎದುರಿಸುವ ಸಂದರ್ಭದಲ್ಲಿ ಸರ್ಕಾರ ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಬೇಕಾಗಿದೆ .
ವಿಶ್ವದಾದ್ಯಂತ ಮಹಾಮಾರಿ ಕೊರೋನ ವೈರಸ್ (ಕೋವಿಡ್-19)ರಿಂದಾಗಿ ಪರಿಸ್ಥಿತಿ ಆಘಾತಕಾರಿ ಹಂತ ತಲುಪುತ್ತಿದೆ. ಕರ್ನಾಟಕದಲ್ಲಿಯೂ ಸಹ ಅತ್ಯಂತ ಗಂಭೀರವಾದ ಪರಿಸ್ಥಿತಿ ಈಗ ನಿರ್ಮಾಣವಾಗುತ್ತಿರುವ ಸಂದರ್ಭದಲ್ಲಿ ಅತ್ಯಂತ ತುರ್ತಾಗಿ ಕೆಲವು ಕ್ರಮಗಳನ್ನು ಕೈಗೊಳ್ಳಬೇಕಾದ ಇದೆ ಎಂದು ಪತ್ರದಲ್ಲಿ ರೆರ ಹೇಳಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-19 ಚಿಕಿತ್ಸೆಗೆ ಅವಕಾಶ ಕಲ್ಪಿಸಿ ದಿನಾಂಕ 23.6.2020 ರಂದು ಸರ್ಕಾರಿ ಅಧಿಸೂಚನೆ ಸಂಖ್ಯೆ: ಹೆಚ್.ಎಫ್.ಡಬ್ಲ್ಯೂ 228:ಎಸಿಎಸ್ 2020 ರ ಅನ್ವಯ ಚಿಕಿತ್ಸಾ ದರಗಳನ್ನು ಅಂತಿಮಗೊಳಿಸಿ ಪ್ರಕಟಿಸಲಾಗಿದೆ. ಆದರೆ ಖಾಸಗಿ ಆಸ್ಪತ್ರೆಗಳು ಈ ದರಗಳನ್ನು ಒಪ್ಪಿಕೊಂಡಿರುವುದಿಲ್ಲ. ಇಂಥ ತುರ್ತು, ಅನಿವಾರ್ಯ, ಗಂಭೀರ ಪರಿಸ್ಥಿತಿಯ ಸಂದರ್ಭದಲ್ಲಿ ಸಂಘರ್ಷಕ್ಕೆ ಕಾಲವಲ್ಲ. ತಕ್ಷಣವೇ ಭಾರತೀಯ ವೈದ್ಯ ಸಂಘದ ಸಭೆ ಏರ್ಪಡಿಸಿ ಖಾಸಗಿ ಆಸ್ಪತ್ರೆಯ ಪ್ರತಿನಿಧಿಗಳನ್ನು ಕರೆದು ತಕ್ಷಣವೇ ಬಗೆಹರಿಸಿ ಬಿಡಬೇಕು. ಇಲ್ಲದಿದ್ದರೆ ಗಂಡಾಂತರಕಾರಿ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ.ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳೆಲ್ಲವೂ ಭರ್ತಿಯಾಗಿವೆ ಎಂಬ ಮಾಹಿತಿ ಇದೆ. ಇದು ಬೆಂಗಳೂರು ಮಾತ್ರವಲ್ಲ ರಾಜ್ಯದ ಇತರೆಡೆಗಳಲ್ಲಿಯೂ ಸಹ ಇದೇ ಸನ್ನಿವೇಶ ಎದುರಾಗಿದೆ. ಈಗ ಲಭ್ಯವಿರುವ ಹಾಸಿಗೆಗಳಿಗಿಂತ 10 ಪಟ್ಟು ಹೆಚ್ಚಿಗೆ ಹಾಸಿಗೆಗಳನ್ನು ಸಿದ್ದಪಡಿಸಿಕೊಳ್ಳುವ ಅವಶ್ಯಕತೆ/ಅನಿವಾರ್ಯತೆ ಇದೆ. ಹಾಸಿಗೆಗಳನ್ನು ಸಿದ್ದಪಡಿಸುವ ಕೆಲಸ ಸಮರೋಪಾದಿಯಲ್ಲಿ ನಡೆಯಬೇಕು. ರಾಜ್ಯಾದ್ಯಂತ ಲಭ್ಯವಿರುವ ಹೈಟೆಕ್ ಆಸ್ಪತ್ರೆಗಳು ಹಾಗೂ ಅದ್ದೂರಿ ಖಾಸಗಿ ಹೊಟೆಲ್ಗಳನ್ನು ಸರ್ಕಾರ ಆದೇಶ ಅಥವಾ ಸುಗ್ರೀವಾಜ್ಞೆಯ ಮೂಲಕ ತಕ್ಷಣವೇ ತನ್ನ ವಶಕ್ಕೆ ತೆಗೆದುಕೊಂಡು ಅವುಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಿ ಕೋವಿಡ್-19 ಚಿಕಿತ್ಸಾ ಕೇಂದ್ರ ಅಥವಾ ಆಸ್ಪತ್ರೆಗಳನ್ನಾಗಿ ಪರಿವರ್ತಿಸಬೇಕು. ಎಂದರು. ಇಂಥ ಕಠಿಣ ಸಂದರ್ಭಗಳಲ್ಲಿ ರಾಜ್ಯದ ನಾಗರಿಕರ ಆರೋಗ್ಯದ ಹಿತದೃಷ್ಟಿಯಿಂದ ಕಾಳಜಿಪೂರ್ವಕ, ಮಾನವೀಯ ಅನುಕಂಪದ, ಸಮರ್ಪಕ, ಸಮಗ್ರ, ಸಮಯೋಚಿತ ಮತ್ತು ಪರಿಣಾಮಕಾರಿಯಾದ ವ್ಯವಸ್ಥೆ ರೂಪಿಸಲು ಅತ್ಯಂತ ಗಂಭೀರ ಕ್ರಮ ಜರುಗಿಸಬೇಕು ಎಂದೂ ಅವರು ಸಲಹೆ ಮಾಡಿದ್ದಾರೆ.