ನವದೆಹಲಿ, ಅ.16: ಮುಂದಿನ ಆವೃತ್ತಿಯ ಇಂಡಿಯನ್ ಪ್ರಿಮೀಯರ್ ಲೀಗ್ ನಲ್ಲಿ ನಾಯಕರಾಗಿ ರವಿಚಂದ್ರನ್ ಅಶ್ವಿನ್ ಅವರೇ ಮುಂದುವರೆಯುತ್ತಾರಾ ಎಂಬ ಬಗ್ಗೆ ನಿರ್ಧಾರವಾಗಿಲ್ಲ ಎಂದು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನೂತನ ಕೋಚ್ ಅನಿಲ್ ಕುಂಬ್ಳೆ ತಿಳಿಸಿದ್ದಾರೆ. ಅಶ್ವಿನ್ ಪಂಜಾಬ್ ತಂಡದೊಂದಿಗೆ ಮುಂದುವರಿಯುತ್ತಾರೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, "ನಾವು ಶೀಘ್ರದಲ್ಲೇ ಇದರ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದು ಹೇಳಿದರು.ಅಶ್ವಿನ್ ನಾಯಕತ್ವದಲ್ಲಿ, ಪಂಜಾಬ್ ತಂಡವು 2018 ರಲ್ಲಿ ಏಳನೇ ಮತ್ತು 2019 ರಲ್ಲಿ ಆರನೇ ಸ್ಥಾನವನ್ನು ಪಡೆದಿತ್ತು. ದಕ್ಷಿಣ ಆಫ್ರಿಕಾ ವಿರುದ್ಧದ ತವರು ಸರಣಿಯಲ್ಲಿ ಅಶ್ವಿನ್ ಅದ್ಭುತ ಪ್ರದರ್ಶನ ನೀಡುತ್ತಿದ್ದು, ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ 14 ವಿಕೆಟ್ ಪಡೆದಿದ್ದಾರೆ. ಭಾರತದ ಮಾಜಿ ಲೆಗ್ ಸ್ಪಿನ್ನರ್ ಮತ್ತು ನಾಯಕ ಕುಂಬ್ಳೆ ತಂಡ ಸ್ಥಿರ ಪ್ರದರ್ಶನ ನೀಡಲು ಶ್ರಮಿಸಲಾಗುವುದು. ಯಾವ ಆಟಗಾರರನ್ನು ಕೈ ಬಿಡಬೇಕು ಯಾರನ್ನು ಉಳಿಸಿಕೊಳ್ಳಬೇಕು ಎಂಬುದರ ಬಗ್ಗೆ ಚರ್ಚೆ ಮಾಡಿ ತೀರ್ಮಾನಿಸಲಾಗುವುದು ಎಂದಿದ್ದಾರೆ.