ಬೆಳೆ ವಿಮೆ ನೋಂದಣಿಗೆ ಸ್ವಯಂ ದೃಢೀಕರಣ ಕುರಿತು ಗೊಂದಲ ಬೇಡ: ಅಧಿಕಾರಿಗಳ ಸ್ಪಷ್ಟನೆ
No need for confusion regarding self-declaration for crop insurance registration: Officials clarify
ಹಾವೇರಿ, ಜು.10: ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ 2026ರ ಹಂಗಾಮಿನ ಬೆಳೆ ವಿಮೆ ನೋಂದಣಿ, ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರ ನೋಂದಣಿ ವಿಧಾನ, ಸ್ವಯಂ ದೃಢೀಕರಣ ಪತ್ರ ಸಲ್ಲಿಕೆ ಮತ್ತು ಬ್ಯಾಂಕ್ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳ ಮೂಲಕ ನಡೆಯುವ ನೋಂದಣಿ ಪ್ರಕ್ರಿಯೆ ಕುರಿತು ರೈತರಿಗೆ ಯಾವುದೇ ಗೊಂದಲ ಉಂಟಾಗದಂತೆ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ್ ಚಂದ್ರಶೇಖರ್ ನಾಯಕ್ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ರೈತ ಮುಖಂಡರು, ವಿವಿಧ ಬ್ಯಾಂಕ್ಗಳ ವ್ಯವಸ್ಥಾಪಕರು, ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಸಿಎಸ್ಸಿ ಕೇಂದ್ರಗಳ ಆಪರೇಟರ್ಗಳು ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ಸಾಲ ಪಡೆಯದ ರೈತರಿಂದ ಸ್ವಯಂ ದೃಢೀಕರಣ ಪತ್ರ ಸಲ್ಲಿಕೆ ಕುರಿತು ಬ್ಯಾಂಕ್ ಹಾಗೂ ಸಿಎಸ್ಸಿ ಕೇಂದ್ರಗಳಲ್ಲಿ ವಿಭಿನ್ನ ರೀತಿಯ ಮಾಹಿತಿ ನೀಡಲಾಗುತ್ತಿರುವುದರಿಂದ ನೋಂದಣಿ ಪ್ರಕ್ರಿಯೆಯಲ್ಲಿ ಗೊಂದಲ ಉಂಟಾಗಿದೆ ಎಂದು ತಿಳಿಸಿದರು. ಸರ್ಕಾರದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಸ್ಪಷ್ಟ ಮಾಹಿತಿ ನೀಡಬೇಕು ಎಂದು ಒತ್ತಾಯಿಸಿದರು.
ಸಹಾಯಕ ಕೃಷಿ ನಿರ್ದೇಶಕ ಗಣೇಶ್ ಕಮ್ಮಾರ ಮಾತನಾಡಿ, ಬೆಳೆ ಸಾಲ (ಅಡಿಠ ಐಠಟಿ/ಏಅಅ) ಪಡೆದ ರೈತರು ಯೋಜನೆಯಡಿ ಕಡ್ಡಾಯವಾಗಿ ಸೇರೆ್ಡಗೊಳ್ಳುತ್ತಾರೆ ಎಂದು ತಿಳಿಸಿದರು. ಯೋಜನೆಯಲ್ಲಿ ಭಾಗವಹಿಸಲು ಇಚ್ಛಿಸದ ರೈತರು ನೋಂದಣಿಯ ಅಂತಿಮ ದಿನಾಂಕಕ್ಕಿಂತ ಕನಿಷ್ಠ ಏಳು ದಿನಗಳ ಮುಂಚಿತವಾಗಿ ಸಂಬಂಧಿತ ಬ್ಯಾಂಕ್ ಶಾಖೆಗೆ ಲಿಖಿತವಾಗಿ ‘ಆಪ್ಟ್ ಓಟ್’ ಅರ್ಜಿ ಸಲ್ಲಿಸಬೇಕು ಎಂದರು.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 