ಪಹಲ್ಗಾಮ್‌ನಲ್ಲಿ ಧರ್ಮ ಕೇಳಿ ಯಾರನ್ನೂ ಕೊಂದಿಲ್ಲ: ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್‌

No one was killed in Pahalgam over religion: Congress spokesperson M. Laxman

ಮೈಸೂರು 25: ಪಹಲ್ಗಾಮ್‌ನಲ್ಲಿ ಮುಸ್ಲಿಮರೇ ಬಹಳಷ್ಟು ಜನರನ್ನು ಕಾಪಾಡಿದ್ದಾರೆ. ಧರ್ಮದ ಹೆಸರು ಕೇಳಿ ಯಾರನ್ನೂ ಅಲ್ಲಿ ಕೊಂದಿಲ್ಲ. ಸುಮ್ಮನೆ ಮುಸ್ಲಿಮರು, ಮುಸ್ಲಿಮರು ಎಂದು ಬಿಜೆಪಿ ಅಪಪ್ರಚಾರ ಮಾಡುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ದೇಶದ ಜನರ ರಕ್ತದ ಮೇಲೆ ಅಧಿಕಾರ ಹಿಡಿಯುವುದು ಬಿಜೆಪಿಯ ಚಟವಾಗಿದೆ. ಘಟನೆ ನಡೆದ ದಿನ ಅಲ್ಲಿ ಸೇನೆ ಮತ್ತು ಪೊಲೀಸ್ ಯಾಕೆ ಇರಲಿಲ್ಲ. ಇದರ ಹಿಂದೆ ಬೇರೆ ಏನೋ ಉದ್ದೇಶವಿದೆ.

ಈ ಬಗ್ಗೆ ಅಂತಾರಾಷ್ಟ್ರೀಯ ಏಜೆನ್ಸಿ ಮೂಲಕ ತನಿಖೆ ಆಗಬೇಕು. ಹಿಂದೂ, ಮುಸ್ಲಿಮರ ನಡುವೆ ಕಂದಕ ಉಂಟು ಮಾಡಿ ಚುನಾವಣೆ ಗೆಲ್ಲುವುದೇ ಬಿಜೆಪಿಯ ಉದ್ದೇಶ. ಮುಸ್ಲಿಮರೆಲ್ಲಾ ಭಯೋತ್ಪಾದಕರು ಎಂದು ಬಿಂಬಿಸುವ ಕೆಲಸ ಶುರುವಾಗಿದೆ ಎಂದು ಕಿಡಿರಕಾರಿದರು.

ನಾಲ್ಕು ಮರಗಳಿಗೆ ಗುಂಡು ಹಾರಿಸಿ, ಅದನ್ನೇ ಸರ್ಜಿಕಲ್ ಸ್ಟ್ರೈಕ್‌ ಎಂದು ಬಿಜೆಪಿ ಬಿಂಬಿಸಿತ್ತು, ಈ ರೀತಿ ಮಾಡಿ ಜನರನ್ನು ಮೂರ್ಖರನ್ನಾಗಿಸುವುದು ಬಿಜೆಪಿಯವರ ಕೆಲಸ ಎಂದು ಲಕ್ಷ್ಮಣ್ ಹರಿಹಾಯ್ದಿದ್ದಾರೆ.