ಅಭಿವೃದ್ಧಿ ಕಾರ್ಯಗಳಲ್ಲಿ ರಾಜಕಾರಣ ಬೇಡ: ಶಾಸಕ ನಾಡಗೌಡ
No politics in development works: MLA Nadagouda
ತಾಳಿಕೋಟಿ 09: ಪಟ್ಟಣದ ಸಮಗ್ರ ಅಭಿವೃದ್ಧಿಗೆ ಬದ್ಧನಾಗಿದ್ದು, ಹಂತ ಹಂತವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಮುದ್ದೇಬಿಹಾಳ ಶಾಸಕ ಸಿ.ಎಸ್. ನಾಡಗೌಡ (ಅಪ್ಪಾಜಿ) ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕ ಸಂಪರ್ಕ ಕಾರ್ಯಾಲಯ ಉದ್ಘಾಟನೆ, ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ಆಂಬುಲೆನ್ಸ್ ಹಸ್ತಾಂತರ ಹಾಗೂ ಹಳೆಯ ತರಕಾರಿ ಮಾರುಕಟ್ಟೆ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾರುಕಟ್ಟೆ ಆವರಣದಲ್ಲಿ ನಡೆದ ಸಾರ್ವಜನಿಕ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪಟ್ಟಣದಲ್ಲಿ ಎರಡು ಸೇತುವೆಗಳ ಕಾಮಗಾರಿಗಳು ನಡೆಯುತ್ತಿದ್ದು, ಕೆಳ ಸೇತುವೆ ಕಾಮಗಾರಿ ಪೂರ್ಣಗೊಂಡಿದೆ. ಮುಖ್ಯ ಸೇತುವೆ ಕಾಮಗಾರಿ ಪ್ರಗತಿಯಲ್ಲಿದೆ. ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಪ್ರತಿ ತಿಂಗಳು ಸಾರ್ವಜನಿಕ ಸಂಪರ್ಕ ಕಾರ್ಯಾಲಯದಲ್ಲಿ ಸಮಯ ನೀಡಲಾಗುವುದು ಎಂದರು. ಕೆಎಸ್ಡಿಎಲ್ ನಿಗಮದಿಂದ ಸರ್ಕಾರಿ ಆಸ್ಪತ್ರೆಗಳಿಗೆ ನೀಡಿರುವ ಎರಡು ಆಂಬುಲೆನ್ಸ್ಗಳಲ್ಲಿ ಒಂದನ್ನು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹಸ್ತಾಂತರಿಸಲಾಗಿದ್ದು, ಗ್ರಾಮೀಣ ಭಾಗದ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು ಅನುಕೂಲವಾಗಲಿದೆ ಎಂದು ತಿಳಿಸಿದರು.
ಎಸ್‌ಎಫ್ಸಿ ಅನುದಾನದಲ್ಲಿ ಸುಮಾರು 2 ಕೋಟಿ ವೆಚ್ಚದಲ್ಲಿ ತರಕಾರಿ ಮಾರುಕಟ್ಟೆ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ಆರು ತಿಂಗಳೊಳಗೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದರು. ಅಭಿವೃದ್ಧಿ ಕಾರ್ಯಗಳಲ್ಲಿ ರಾಜಕಾರಣ ಮಾಡುವ ಅಗತ್ಯವಿಲ್ಲ. ಹಿಂದಿನ ಅವಧಿಯಲ್ಲಿ ಸಮರ್ಕ ಯೋಜನೆ ಇಲ್ಲದೆ ಕೈಗೊಂಡ ಕಾಮಗಾರಿಗಳಿಂದ ಉಂಟಾಗಿರುವ ಸಮಸ್ಯೆಗಳನ್ನು ಸರಿಪಡಿಸಿ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸುವುದು ಅನಿವಾರ್ಯವಾಗಿದೆ.
ಇದಕ್ಕೆ ಜನರ ಸಹಕಾರ ಅತ್ಯಂತ ಮುಖ್ಯ ಎಂದು ಶಾಸಕ ನಾಡಗೌಡ ಹೇಳಿದರು. ಈ ಸಂದರ್ಭದಲ್ಲಿ ಪುರಸಭೆ ಸಿಬ್ಬಂದಿ ಹಾಗೂ ಬೀದಿಬದಿ ವ್ಯಾಪಾರಸ್ಥರ ಸಂಘದ ವತಿಯಿಂದ ಶಾಸಕರನ್ನು ಸನ್ಮಾನಿಸಲಾಯಿತು. ಎಸ್‌ಐಆರ್ ಕಾರ್ಯದಲ್ಲಿ ಸೇವೆ ಸಲ್ಲಿಸಿದ ಸ್ವಯಂಸೇವಕರನ್ನೂ ಗೌರವಿಸಲಾಯಿತು. ಮುಸ್ಲಿಂ ಧಾರ್ಮಿಕ ಮುಖಂಡ ಸಯ್ಯದ್ ಶಕೀಲ್ ಅಹ್ಮದ್ ಖಾಜಿ ಸಾನ್ನಿಧ್ಯ ವಹಿಸಿದ್ದರು. ವಿವಿಧ ಪಕ್ಷಗಳ ಮುಖಂಡರು, ಪುರಸಭೆ ಅಧಿಕಾರಿಗಳು, ವೈದ್ಯಾಧಿಕಾರಿಗಳು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 