ಕಲಬುರಗಿ,
ಡಿ. 20 ನಗರದಲ್ಲಿ ಮೂರು ದಿನಗಳವರೆಗೆ ನಿಷೇಧಾಜ್ಞೆ
ಜಾರಿಗೊಳಿಸಿರುವುದರಿಂದ ಜಿಲ್ಲೆಯಲ್ಲಿ ಯಾವುದೇ ರೀತಿಯ
ಬಂದ್ ಹಾಗೂ ಪ್ರತಿಭಟನೆಗೆ ಅವಕಾಶವಿರುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಎಮ್.ಎನ್.ನಾಗರಾಜ್ ತಿಳಿಸಿದ್ದಾರೆ.ತುರ್ತು ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈಶಾನ್ಯ ವಲಯ
ಐಜಿಪಿ ಮನೀಷ್ ಖರ್ಬೀಕರ್ ನೇತೃತ್ವದಲ್ಲಿ ಶಾಸಕಿ
ಖನೀಜ್ ಫಾತೀಮಾ ಹಾಗೂ ಮುಸ್ಲಿಂ ಸಮುದಾಯದ ಮುಖಂಡರ ಜೊತೆ ಶಾಂತಿ ಸಭೆ ನಡೆಸಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದ್ದಾರೆ
ಎಂದರು.ನಗರದಲ್ಲಿ ಭದ್ರತೆಗಾಗಿ 15 ಕೆ.ಎಸ್.ಆರ್.ಪಿ ತುಕಡಿಗಳನ್ನು ನಿಯೋಜಿಸಲಾಗಿದ್ದು, 13 ಚೆಕ್
ಪೋಸ್ಟ್ ಗಳನ್ನು ತೆರೆಯಲಾಗಿದೆ ಎಂದು ತಿಳಿಸಿದರು. ಕಲಬುರಗಿ ಭದ್ರತಾ ಉಸ್ತುವಾರಿಯಾಗಿ ಕೆಎಸ್ ಆರ್ ಪಿ ಎಡಿಜಿಪಿ ಅಲೋಕ್ ಕುಮಾರ್ ವನ್ನು ನಿಯೋಜಿಸಲಾಗಿದೆ
ಎಂದು ಮಾಹಿತಿ ನೀಡಿದರು. ಎಡಿಜಿಪಿ ಅಲೋಕ್ ಕುಮಾರ್ ಮಾತನಾಡಿ, ರಾಜ್ಯದ ವಿವಿಧೆಡೆ ಮೂರು ದಿನಗಳ ಕಾಲ
144 ಸೆಕ್ಷನ್ ನಿಷೇಧಾಜ್ಞೆ ಜಾರಿಯಿದೆ.ನಿನ್ನೆ ಕಲಬುರಗಿಯಲ್ಲಿ ನಡೆದ ಪ್ರತಿಭಟನೆಯನ್ನು ಪೊಲೀಸರು
ಸಮರ್ಥವಾಗಿ ನಿಭಾಯಿಸಿದ್ದಾರೆ ಎಂದು ತಿಳಿಸಿದರು . ಪರಿಸ್ಥಿತಿ ಅವಲೋಕಿಸಲು ನನ್ನನ್ನು ಇಲಾಖೆ ಕಲಬುರಗಿಗೆ ನಿಯೋಜಿಸಿದೆ.
ಯಾರೇ ಕಾನೂನು ಕೈಗೆತ್ತಿಕೊಂಡರೂ ಅವರ ವಿರುದ್ಧ ಕಠಿಣ
ಕ್ರಮ ಕೈಗೊಳ್ಳುವುದಾಗಿ ಸಮಾಜದಲ್ಲಿ ಶಾಂತಿ ಕದಡುವ ಕಿಡಿಗೇಡಿಗಳಿಗೆ ಎಚ್ಚರಿಕೆ ನೀಡಿದರು. ಅಧಿಕಾರಿಗಳು ಹಾಗೂ ಧಾರ್ಮಿಕ ಮುಖಂಡರ
ಜೊತೆ ಸಭೆ ನಡೆಸುವುದಾಗಿ ಅವರು ತಿಳಿಸಿದರು. ಗುರುವಾರ ಕಲಬುರಗಿ ಬಂದ್ ಹಿನ್ನೆಲೆಯಲ್ಲಿ ಜಿಲ್ಲೆಯ
ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.