ಮಂಗಳೂರು ವಿಮಾನ ನಿಲ್ದಾಣಕ್ಕೆ ಸಾರ್ವಜನಿಕರಿಗೆ ಪ್ರವೇಶವಿಲ್ಲ

ಮಂಗಳೂರು , ಮೇ .11, ಮಂಗಳವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ದುಬಾಯಿಯಿಂದ ಭಾರತೀಯರನ್ನು ಕರೆದುಕೊಂಡು  ವಿಮಾನ ಬರಲಿದ್ದು, ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಇಲ್ಲಿಗೆ ಬರುವ ಪ್ರಯಾಣಿಕರನ್ನು ವೈದ್ಯಕೀಯ ತಪಾಸಣೆ ನಡೆಸಿ, ನಂತರ ಆಸ್ಪತ್ರೆ ಅಥವಾ ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ಕ್ವಾರೆಂಟೈನ್ ಕೇಂದ್ರಗಳಿಗೆ ಜಿಲ್ಲಾಡಳಿತವೇ ವಾಹನದ ಮೂಲಕ ಕರೆದುಕೊಂಡು ಹೋಗಲು ವ್ಯವಸ್ಥೆ ಮಾಡಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಥವಾ ಪ್ರಯಾಣಿಕರ ಕುಟುಂಬಸ್ಥರಿಗೆ ವಿಮಾನ ನಿಲ್ದಾಣಕ್ಕೆ ಬರಲು ಅವಕಾಶ ಇಲ್ಲ. ಅಲ್ಲದೇ, ಕ್ವಾರೆಂಟೈನ್ ಕೇಂದ್ರಗಳಿಗೂ ಸಾರ್ವಜನಿಕರಿಗೆ ಪ್ರವೇಶವಿಲ್ಲ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.