ಜನರಿಗೆ ಪರಿಹಾರ ನೀಡುವ ವಿಚಾರದಲ್ಲಿ ಯಾವುದೇ ರಾಜೀಯಿಲ್ಲ : ಬಿ.ಎಸ್.ಯಡಿಯೂರಪ್ಪ

ಬೆಳಗಾವಿ, ಆ 11       ಜನ-ಜಾನುವಾರುಗಳ ರಕ್ಷಣೆ, ಪುನರ್ವಸತಿ ಕಲ್ಪಿಸುವುದು ,  ಜನರಿಗೆ ಪರಿಹಾರ ನೀಡುವುದು ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಇದರಲ್ಲಿ ಯಾವುದೇ ರಾಜೀಯಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ  

ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆಯಲ್ಲಿ ಪ್ರವಾಹ ಬಾಧಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ಹಾಗೂ ಹಿರಿಯ ಅಧಿಕಾರಿಗಳ ಸಭೆಯ ಬಳಿಕ  ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  

ಪ್ರವಾಹ ಸ್ಥಿತಿಯನ್ನು ನೋಡಿದರೆ ಅಂದಾಜು 30 ರಿಂದ 40 ಸಾವಿರ ಕೋಟಿ ರೂಪಾಯಿ ಹಾನಿಯಾಗಿದೆ ಎಂಬುದು ತಮ್ಮ ಅಭಿಪ್ರಾಯವಷ್ಟೆ. ಬೆಳಗಾವಿ ಸೇರಿದಂತೆ ರಾಜ್ಯದಲ್ಲಿ ನೆರೆ ಪ್ರವಾಹ ಹಾಗೂ ಧಾರಾಕಾರ  ಮಳೆಯಿಂದಾಗಿ 10 ಸಾವಿರ ಕೋಟಿ ರೂ.ನಷ್ಟು ಹಾನಿಯಾಗಿದೆ ಎಂದು ಪ್ರಾಥಮಿಕ ಅಂದಾಜು ಮಾಡಲಾಗಿದೆ. ಸಮಗ್ರ ಸಮೀಕ್ಷೆ ಬಳಿಕ ಹಾನಿ ಕುರಿತು ಸ್ಪಷ್ಟತೆ ಸಿಗಲಿದೆ . ತುರ್ತಾಗಿ 3 ಸಾವಿರ ಕೋ ರೂ. ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ರಾಷ್ಟ್ರೀಯ ವಿಪತ್ತು ಘೋಷಣೆ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಬಿಟ್ಟದ್ದು ಎಂದು ಅವರು ತಿಳಿಸಿದರು.  

ಬೆಳೆಹಾನಿಯಿಂದ ತತ್ತರಿಸಿರುವ ರೈತರು, ಮನೆಗಳನ್ನು ಕಳೆದುಕೊಂಡಿರುವ ಜನರು ಆತಂಕ ಪಡಬೇಕಿಲ್ಲ. ರಾಜ್ಯ ಸರ್ಕಾರ ಅವರ ನೆರವಿಗೆ ಇರುವುದಾಗಿ ಯಡಿಯೂರಪ್ಪ ಅಭಯ ನೀಡಿದರ