ಕೃಷಿ ಚಟುವಟಿಕೆಗಳಿಗೆ ನಿರ್ಬಂಧ ಇಲ್ಲ: ಬಿತ್ತನೆ ಬೀಜ ಸರಬರಾಜು ಮಾಡುವಾಗ ಅಧಿಕಾರಿಗಳಿಂದ ಪಾಸ್ ಪಡೆಯಿರಿ: ಕೃಷಿ ಸಚಿವ ಬಿ.ಸಿ.ಪಾಟೀಲ್
ಬೆಂಗಳೂರು, ಮಾ. 27, ಮಹಾಮಾರಿ ಕೊರೊನಾದಿಂದ ಇಡೀ ಜಗತ್ತೇ ತಲ್ಲಣಗೊಂಡಿದ್ದು, ಇಂತಹ ಸಂದರ್ಭದಲ್ಲಿ ಜಗತ್ತಿಗೆ ಅನ್ನವನ್ನು ನೀಡುವ ಅನ್ನದಾತನಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ದಿಟ್ಟ ಕ್ರಮಗಳನ್ನು ಕೈಗೊಂಡಿವೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.
ರೈತರು ಬೆಳೆದ ಬೆಳೆಗಳನ್ನು ಕೊಯ್ಲು ಮಾಡಲು, ಮಾರಾಟ ಮಾಡಲು ಯಾವುದೇ ನಿಬಂಧನೆಗಳು ಇರುವುದಿಲ್ಲ. ಮುಂಗರು ಪ್ರಾರಂಭವಾದರೆ ರೈತ ಹೊಲದಲ್ಲಿ ಬಿತ್ತನೆ ಮಾಡಲು, ಸರ್ಕಾರ ರೈತನಿಗೆ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಒದಗಿಸಲು ಕ್ರಮಗಳನ್ನು ಕೈಗೊಂಡಿದೆ. ಬೆಳೆಗಳನ್ನು ಸಾಗಾಣಿಕೆ ಮಾಡಲು ಅಗತ್ಯ ವಸ್ತುಗಳ ಕಾಯ್ದೆ ಅಡಿ ತಂದಿದ್ದು, ಈ ಸಂಬಂಧ ರಾಜ್ಯದ ಎಲ್ಲಾ ಕೃಷಿ ನಿರ್ದೇಶಕರು ಹಾಗೂ ಜಂಟಿ ಕೃಷಿ ನಿರ್ದೇಶಕರಿಗೆ ಹಾಗೂ ಎಲ್ಲಾ ಇಲಾಖೆಗಳಿಗೂ ಸುತ್ತೋಲೆ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ಇತರೆ ಭಾಗಗಳಲ್ಲಿ ಭತ್ತ ಬೆಳೆದ ರೈತರು ಅದರ ಕೊಯ್ಲಿಗೆ ಹೊರ ರಾಜ್ಯದಿಂದ ಕೊಯ್ಲು ಯಂತ್ರ ತರಬೇಕಾಗುತ್ತದೆ ಎಂಬ ಆತಂಕದಲ್ಲಿರುವುದು ತಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗಿದ್ದು, ರೈತರು ಯಾವುದೇ ಕಾರಣಕ್ಕೂ ಆತಂಕಕ್ಕೊಳಗಾಗುವುದು ಬೇಡ. ಬಿತ್ತನೆ ಮಾಡಲಾಗಲೀ ಅಥವಾ ಕೊಯ್ಲು ಮಾಡಲಾಗಲಿ ರೈತರಿಗೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.
ರೈತರು ಯಾವುದೇ ಆತಂಕಕ್ಕೊಳಗಾಗದೇ ತಮ್ಮ ಬಿತ್ತನೆ ಕಾರ್ಯ ಕೃಷಿ ಕಾರ್ಯದಲ್ಲಿ ತೊಡಗಬಹುದು. ರೈತರ ಕೃಷಿ ಚಟುವಟಿಕೆಗಳಿಗೆ ಯಾರೂ ಸಹ ತೊಂದರೆ ಮಾಡಬಾರದು. ಯಂತ್ರೋಪಕರಣ ತಂದು ಕೊಯ್ಲು ಕೃಷಿ ಚಟುವಟಿಕೆ ಮಾಡುವ ಮುನ್ನ ರೈತರು ಅಧಿಕಾರಿಗಳಿಗೆ ಮಾಹಿತಿ ಕೊಡಬೇಕು. ಕೃಷಿ ಚಟುವಟಿಕೆ ಮಾಡುವಾಗ ರೈತರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಬಿತ್ತನೆ ಬೀಜ ಮತ್ತು ಫಸಲು ಸರಬರಾಜು ಮಾಡುವಾಗ ಇಲಾಖಾಧಿಕಾರಿಗಳಿಂದ ಸರಬರಾಜು ಮಾಡುವ ವಾಹನಗಳಿಗೆ ಕೃಷಿಕರು ಪಾಸ್ ಪಡೆಯಬೇಕು ಎಂದು ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 