ಪಾಕ್ ಗೆ ಸ್ಯಾಟ್ಲೈಟ್ ಕರೆ ಹೋಗಿಲ್ಲ: ಲಕ್ಷ್ಮೀ ಪ್ರಸಾದ್ ಟ್ವೀಟ್
ಮಂಗಳೂರು, ಆಗಸ್ಟ್ 18 ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಿಂದ ಪಾಕಿಸ್ತಾನಕ್ಕೆ ಉಪಗ್ರಹದ ಮೂಲಕ ಯಾವುದೇ ದೂರವಾಣಿ ಕರೆ ಹೋಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಟ್ವೀಟ್ ಮಾಡಿದ್ದಾರೆ. ರಾಜ್ಯದಲ್ಲಿ ಭಯೋತ್ಪಾದಕ ದಾಳಿಯಾಗುವ ಶಂಕೆಯಿಂದ ಕಟ್ಟೆಚ್ಚರ ಘೋಷಿಸಲಾದ ಬೆನ್ನಲ್ಲೇ, ದೆಹಲಿಯಲ್ಲಿ ಸೆರೆಸಿಕ್ಕ ಶಂಕಿತ ಉಗ್ರನೊಬ್ಬ ಬೆಳ್ತಂಗಡಿಯಿಂದ ಪಾಕ್ಗೆ ಉಪಗ್ರಹದ ಮೂಲಕ ದೂರವಾಣಿ ಕರೆ ಮಾಡಿರುವ ಬಗ್ಗೆ ಬಾಯ್ಬಿಟ್ಟಿದ್ದು, ಎನ್ಐಎ ಅಧಿಕಾರಿಗಳು ಕರಾವಳಿಗೆ ಬಂದು ತನಿಖೆ ನಡೆಸುತ್ತಿದ್ದಾರೆ ಎಂಬ ವದಂತಿ ಹರಡಿತ್ತು. ಈ ಕುರಿತು ಪ್ರತಿಕ್ರಿಯಿಸಿದ ಅವರು, ಜಿಲ್ಲೆಯಿಂದ ಯಾವುದೇ ಕರೆ ಹೋಗಿಲ್ಲ. ರಾಷ್ಟ್ರೀಯ ತನಿಖಾ ತಂಡದ ಅಧಿಕಾರಿಗಳು ಜಿಲ್ಲೆಗೆ ಬಂದಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 