ಬೆಂಗಳೂರಿನಲ್ಲಿ ಸೀಲ್ ಡೌನ್ ಇಲ್ಲ: ಭಾಸ್ಕರ್ ರಾವ್
ಬೆಂಗಳೂರು, ಏಪ್ರಿಲ್ 10, ರಾಜ್ಯದಲ್ಲಿ ಲಾಕ್ಡೌನ್ ಅವಧಿ ಮುಗಿಯುತ್ತಿದ್ದಂತೆ ಸೀಲ್ಡೌನ್ ಜಾರಿ ಮಾತುಗಳು ಬಹಳವಾಗಿ ಕೇಳಿ ಬರುತ್ತಿವೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸ್ಪಷ್ಟನೆ ನೀಡಿದ್ದು, ಸದ್ಯಕ್ಕೆ ಬೆಂಗಳೂರಿನಲ್ಲಿ 'ಸೀಲ್ಡೌನ್' ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ .''ಬೆಂಗಳೂರು ಸೀಲ್ ಡೌನ್ ಆಗಲಿದೆ ಎಂಬ ಸುದ್ದಿಗಳು ಹರಿದಾಡುತ್ತಿದೆ.ಸೀಲ್ ಡೌನ್ ಎಂದರೆ ಮನೆಯಿಂದ ಯಾರು ಹೊರೆಗೆ ಬರುವಂತಿಲ್ಲ ಮಾಧ್ಯಮದವರು ಸಹ ಹೊರೆಗೆ ಬರುವಂತಿಲ್ಲ ಅಂತಹ ಸಮಯದಲ್ಲಿ ಕೇವಲ ಮತ್ತು ಬಿಬಿಎಂಪಿ ಮತ್ತು ಪೊಲೀಸ್ ಸಿಬ್ಬಂದಿ ಬಿಟ್ಟರೆ ಬೇರೆಯವರು ಹೊರಗೆ ಬರುವಂತಿಲ್ಲ. ಸದ್ಯಕ್ಕೆ ಬೆಂಗಳೂರಿನಲ್ಲಿ 'ಸೀಲ್ಡೌನ್' ಮಾಡುವ ಪರಿಸ್ಥತಿ ಇನ್ನೂ ಬಂದಿಲ್ಲ ಎಂದರು .
ಸೋಂಕಿತರ ಸಂಖ್ಯೆ ಅಧಿಕವಾಗುತ್ತಿದ್ದು, ನಿಯಂತ್ರಿಸಲು ಸೀಲ್ಡೌನ್ ಅಗತ್ಯ ಎಂಬ ಸುದ್ದಿ ಮಾಧ್ಯಮದಲ್ಲಿ ವ್ಯಾಪಕವಾಗುತ್ತಿದೆ. ರಾಜ್ಯಾದ್ಯಂತ ಕೊರೊನಾ ಕೇಸ್ ಹೆಚ್ಚಿರುವ ಜಿಲ್ಲೆಗಳನ್ನು ಡೇಂಜರ್ ಝೋನ್ ಎಂದು ಗುರುತಿಸಿ, ಆ ಜಿಲ್ಲೆಗಳನ್ನು ಮಾತ್ರ ಸಂಪೂರ್ಣವಾಗಿ ಸೀಲ್ಡೌನ್ ಮಾಡಲಾಗುತ್ತೆ ಎನ್ನಲಾಗುತ್ತಿದೆ. ಈ ನಡುವೆ ಬೆಂಗಳೂರಿನ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಸಂಪೂರ್ಣವಾಗಿ ಸೀಲ್ ಡೌನ್ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.ಈ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಡಿಸಿಪಿಗಳ ಸಭೆ ಕರೆದಿದ್ದು, ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು ಆದರೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಸದ್ಯಕ್ಕೆ ನಗರದಲ್ಲಿ ಇಂತಹ ಪರಿಸ್ಥಿತಿ ಬಂದಿಲ್ಲ. ಆರಾಮಾಗಿರಿ'' ಎಂದು ಆಯುಕ್ತ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದಾರೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 