ಜಲಾಶಯದಲ್ಲಿ ನೀರಿದ್ದರೂ ರೈತರಿಗಿಲ್ಲ ನೀರು : ಬರ ಪೀಡಿತ ಪ್ರದೇಶವೆಂದು ಘೋಷಿಸುವಂತೆ ಬಡಿಗೇರ್ ವಿರೇಶ್ ಸರ್ಕಾರಕ್ಕೆ ಹಕ್ಕೋತ್ತಾಯ
No water for farmers despite water in the reservoir: Badiger Viresh urges the government to declare
ಲೋಕದರ್ಶನ ವರದಿ
ಕಂಪ್ಲಿ 18: ಈ ಬಾರಿ ತುಂಗಭದ್ರ ಜಲಾಶಯದಲ್ಲಿ ನೀರಿದ್ದರೂ ಸಹ ಬಲದಂಡೆಯ ಎಲ್.ಎಲ್.ಸಿ ಮತ್ತು ಎಚ್.ಎಲ್.ಸಿ ಕಾಲುವೆಗಳಿಗೆ ಸಮರ್ಕವಾಗಿ ನೀರು ಹರಿಯದ ಪರಿಣಾಮ ರೈತರು ಬೆಳೆ ಇಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಸರ್ಕಾರ ಬರ ಪೀಡಿತ ಪ್ರದೇಶವೆಂದು ಘೋಷಿಸಿ, ಪರಿಹಾರ ಕಲ್ಪಿಸುವ ಮೂಲಕ ರೈತರ ಬದುಕಿಗೆ ಬೆಳಕಾಗಬೇಕು ಎಂದು ಕಂಪ್ಲಿ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಕಂಪ್ಲಿ ಮಂಡಲ ಯುವ ಮೋರ್ಚ ಅಧ್ಯಕ್ಷ ಬಡಿಗೇರ್ ವಿರೇಶ ಆಗ್ರಹಿಸಿದರು.
ಅವರು ಮಂಗಳವಾರ ಪಟ್ಟಣದಲ್ಲಿ ಪತ್ರಿಕಾ ಪ್ರಕಟಣೆ ನೀಡಿ ಮಾತನಾಡಿ, ಹಲವು ವರ್ಷಗಳ ಕಾಲ ಪ್ರತಿ ಬಾರಿ ಸಮರ್ಕವಾಗಿ ನೀರು ಹರಿಸಿದ ಹಿನ್ನಲೆ ರೈತರು ಬದುಕು ಸಮೃದ್ಧಿಯಾಗಿತ್ತು. ಆದರೆ, ಈಗ ನೀರಿಲ್ಲದೇ, ರೈತರ ಜೀವನ ಕಷ್ಟಕರವಾಗಿದೆ. ಜಲಾಶಯದಲ್ಲಿ ನೀರಿದ್ದರೂ ಸಹ ರೈತರಿಗೆ ನೀರಿಲ್ಲ. ಸರ್ಕಾರ ಮತ್ತು ಸ್ಥಳೀಯ ಶಾಸಕರಿಗೆ ರೈತರ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲದಂತಾಗಿದೆ. ಕಂಪ್ಲಿ, ಕುರುಗೋಡು ತಾಲೂಕು ವ್ಯಾಪ್ತಿಯಲ್ಲಿ ರೈತರು ಬೆಳೆ ಬೆಳೆಯದೇ ಕಂಗಾಲಾಗಿದ್ದಾರೆ. ಹೇಗಪ್ಪಾ ಮುಂದಿನ ಜೀವನ ಎನ್ನುವ ಸ್ಥಿತಿಯಲ್ಲಿ ರೈತರಿದ್ದಾರೆ. ತುಂಗಭದ್ರಾ ಜಲಾಶಯ ಕರ್ನಾಟಕದಲ್ಲಿದ್ದರೂ ಆಂಧ್ರದವರ ಹಿಡಿತದಲ್ಲಿಂದ್ದಂತೆ ಬ್ರಾಸವಾಗಿದೆ. ಇದು ಸರಿಯಲ್ಲ. ಮುಂದಿನ ದಿನದಲ್ಲಿ ರೈತರು ಸರ್ಕಾರ ಮತ್ತು ಸ್ಥಳೀಯ ಶಾಸಕರಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 