ಸಿದ್ದರಾಮಯ್ಯ ಕಾಂಗ್ರೆಸ್ ತೊರೆದರೂ ಆಶ್ಚರ್ಯವಿಲ್ಲ: ರೇಣುಕಾಚಾರ್ಯ

ದಾವಣಗೆರೆ, ಅ.  19: ಕಾಡಿ ಬೇಡಿ ವಿರೋಧ ಪಕ್ಷದ ನಾಯಕನ ಸ್ಥಾನ ಪಡೆದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಅವರು ಕಾಂಗ್ರೆಸ್ ಪಕ್ಷ ತೊರೆದರೂ ಆಶ್ಚರ್ಯವಿಲ್ಲ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದಶರ್ಿ ಎಂ.ಪಿ. ರೇಣುಕಾಚಾರ್ಯ ವ್ಯಂಗ್ಯವಾಡಿದ್ದಾರೆ. 

ಹೊನ್ನಾಳಿ ತಾಲ್ಲೂಕಿನ ಹಿರೇಗೋಣಿಗೆರೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಡಿ ಬೇಡಿ ವಿರೋಧ ಪಕ್ಷದ ನಾಯಕನ ಸ್ಥಾನ ಪಡೆದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ ಗೋಲಿ ಆಡುವವರು ಎಂದು ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಅವರು ಕಿಡಿಕಾರಿದರು.  

ಸಾವರ್ಕರ್ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು,  ನಿಮ್ಮಂತೆ ಮತಾಂಧ ಟಿಪ್ಪು ಜಯಂತಿ ನಾವು ಮಾಡುವುದಿಲ್ಲ. ಮೊದಲು ಅವರು ಸಾವರ್ಕರ್ ಬಗ್ಗೆ ಇತಿಹಾಸ ಓದಿ ತಿಳಿದುಕೊಳ್ಳಲಿ ಎಂದರು. 

ಕೂಡಲೇ ಸಿದ್ದರಾಮಯ್ಯ ಅವರು ತಮ್ಮ ಹೇಳಿಕೆ ಹಿಂಪಡೆದು, ಕ್ಷಮೆ ಯಾಚಿಸುವಂತೆ ಅವರು ಒತ್ತಾಯಿಸಿದರು. 

ಗಾಂಧೀಜಿಯವರ 150 ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಕಳೆದ ಏಳು ದಿನಗಳಿಂದ ತಾಲೂಕಿನಾದ್ಯಂತ ರೇಣುಕಾಚಾರ್ಯ ಗಾಂಧಿ ಸಂಕಲ್ಪಯಾತ್ರೆ ಕೈಗೊಂಡಿದ್ದಾರೆ.  

ರೇಣುಕಾಚಾರ್ಯ ಅವರ ಜೊತೆಗೆ ಎಂ.ಪಿ. ಸಿದ್ದೇಶ್ವರ್ ಸೇರಿ ನೂರಾರು ಕಾರ್ಯಕರ್ತರು ಪಾದಯಾತ್ರೆಗೆ ಕೈಜೋಡಿಸಿದ್ದಾರೆ.