ಲೋಕಸಭೆಗೆ ದಿಕ್ಸೂಚಿ ಅಲ್ಲ: ದೇವೇಗೌಡ

ಬೆಂಗಳೂರು,ಸೆ.3-ನಗರಸಭೆ ಸ್ಥಳೀಯ ಸಂಸ್ಥೆಗಳ ಫಲಿತಾಂಶ  ಲೋಕಸಭೆಗೆ ದಿಕ್ಸೂಚಿ ಅಲ್ಲ.  ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಪ್ರತಿಕ್ರಿಯಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಮಾತನಾಡಿದ ಅವರು, ಅತಂತ್ರವಾಗಿರುವ ಕಡೆ ಬಿಜೆಪಿಯನ್ನು ಹೊರತುಪಡಿಸಿ ಇತರರೊಂದಿಗೆ ಹೊಂದಾಣಿಕೆ ಮಾಡಲಾಗುವುದು. ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಈ ಹೊಂದಾಣಿಕೆ ಅನಿವಾರ್ಯವಾಗಿದೆ. ಯಾವುದೇ ಕಾರಣಕ್ಕೂ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಹೇಳೀದರು. ಎಂದು ಹೇಳಿದರು. 

ಕೆಲವು ಜಿಲ್ಲೆಗಳಲ್ಲಿ ಮಾತ್ರ ನಗರ ಸ್ಥಳೀಯ ಸಂಸ್ಥೆ ಚುನಾವಣೆ ನಡೆದಿದೆ.  ಇನ್ನು ಕೆಲವು ಜಿಲ್ಲೆಗಳಲ್ಲಿ ಚುನಾವಣೆ ನಡೆದಿಲ್ಲ. ಹಾಗಾಗಿ ಈಫಲಿತಾಂಶವನ್ನು ಮುಂದಿನ ಲೋಕಸಭೆ ಚುನಾವಣೆಯ ದಿಕ್ಸೂಚಿ ಎಂದು ಹೇಳಲು ಸಾಧ್ಯವಿಲ್ಲ ಎಂದರು. 

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ಈಗಾಗಲೇ ನಿಧರ್ಾರವಾಗಿದೆ. ಲೋಕಸಭೆ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಗಳ ನಡುವೆ ವ್ಯತ್ಯಾಸಗಳಿವೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ಥಳೀಯ ವಿಷಯಗಳಿಗೆ ಆದ್ಯತೆ ದೊರೆಯುತ್ತದೆ ಎಂದು ಹೇಳಿದರು.